ದೇಶ

ಪ್ರಧಾನಿ ಮೋದಿಯಂತೆ ಮಾಧ್ಯಮಗಳ ಮುಂದೆ ಮಾತನಾಡಲು ನಾನು ಹೆದರುತ್ತಿರಲಿಲ್ಲ: ಮನಮೋಹನ್ ಸಿಂಗ್

ಮಾಧ್ಯಮಗಳ ಮುಂದೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಹೆದರಬಹುದು ಆದರೆ ನಾನು ಎಂದಿಗೂ ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್...

ಪ್ರಧಾನಿ ಮೋದಿಯಂತೆ ಮಾಧ್ಯಮಗಳ ಮುಂದೆ ಮಾತನಾಡಲು ನಾನು ಹೆದರುತ್ತಿರಲಿಲ್ಲ: ಮನಮೋಹನ್ ಸಿಂಗ್
ನರೇಂದ್ರ ಮೋದಿ-ಮನಮೋಹನ್ ಸಿಂಗ್
Published On :
ನವದೆಹಲಿ: ಮಾಧ್ಯಮಗಳ ಮುಂದೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಹೆದರಬಹುದು ಆದರೆ ನಾನು ಎಂದಿಗೂ ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. 
ಚೇನ್‌ಜಿಂಗ್ ಇಂಡಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಅವರು ಎಂತಹ ಪರಿಸ್ಥಿತಿಯಲ್ಲೂ ನಾನು ಮಾಧ್ಯಮಗಳ ಮುಂದೆ ಮಾತನಾಡಲು ಹೆದರಿರಲಿಲ್ಲ. ಆದರೆ ಇಂದಿನ ಪ್ರಧಾನಿ ಮಾಧ್ಯಮಗಳ ಮುಂದೆ ಮಾತನಾಡಲು ಹೆದರುತ್ತಿದ್ದಾರೆ ಎಂದು ಹೇಳಿದ್ದಾರೆ. 
ಇದೇ ವೇಳೆ ಮಾತನಾಡಿದ ಅವರು, ಭಾರತವು ಒಂದು ಪ್ರಮುಖ ಆರ್ಥಿಕ ಜಾಗತಿಕ ಶಕ್ತಿಯಾಗಲು ಉದ್ದೇಶಿಸಲಾಗಿತೆಂದು ಮಾಜಿ ಪ್ರಧಾನಿಗಳು ಪ್ರತಿಪಾದಿಸಿದರು. ಇನ್ನು ಚೇನ್‌ಜಿಂಗ್ ಇಂಡಿಯಾ ಪುಸ್ತಕದಲ್ಲಿ ನಾನು ಪ್ರತಿ ಬಾರಿ ಮಾಧ್ಯಮಗಳ ಮುಂದೆ ಮಾತನಾಡಿದ್ದೇನೆ. ಅಲ್ಲದೆ ವಿದೇಶಿ ಪ್ರವಾಸಗಳನ್ನು ಮುಗಿಸಿ ಬಂದ ನಂತರವೂ ನಾನು ಹಲವು ಸುದ್ದಿಗೋಷ್ಠಿಗಳನ್ನು ನಡೆಸಿದ್ದು ಈ ಪುಸ್ತಕದಲ್ಲಿ ಅವುಗಳನ್ನು ನಮೂದಿಸಲಾಗಿದೆ ಎಂದರು. 
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ 10 ವರ್ಷಗಳ ಕಾರ್ಯವೈಖರಿ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ದೇಶದ ಪ್ರಗತಿಯನ್ನು ಸಂಪೂರ್ಣವಾಗಿ ವಿವರಿಸಲಾಗಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.