ದೇಶ

ಕುಡಿದು ವಾಹನ ಚಾಲನೆ: ಮತ್ತಿನಲ್ಲಿ ಟ್ರಾಫಿಕ್ ಪೊಲೀಸ್'ನನ್ನೇ 100 ಮೀಟರ್ ಎಳೆದೊಯ್ದ ವ್ಯಕ್ತಿ!

ಕುಡಿದು ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ ಒಬ್ಬರಿಗೆ ಡಿಕ್ಕಿ ಹೊಡೆದು ಬಳಿಕ ಅವರ ದೇಹವನ್ನು 100 ಮೀಟರ್ ವರೆಗೂ ಎಳೆದೊಯ್ದಿರುವ ಘಟನೆ ಗುರುಗ್ರಾಮದ ಸೆಕ್ಟರ್ 29ರನಲ್ಲಿ ನಡೆದಿದೆ...

ಕುಡಿದು ವಾಹನ ಚಾಲನೆ: ಮತ್ತಿನಲ್ಲಿ ಟ್ರಾಫಿಕ್ ಪೊಲೀಸ್'ನನ್ನೇ 100 ಮೀಟರ್ ಎಳೆದೊಯ್ದ ವ್ಯಕ್ತಿ!
ಕುಡಿದು ವಾಹನ ಚಾಲನೆ: ಮತ್ತಿನಲ್ಲಿ ಟ್ರಾಫಿಕ್ ಪೊಲೀಸ್'ನನ್ನು 100 ಮೀಟರ್ ಎಳೆದೊಯ್ದ ವ್ಯಕ್ತಿ!
Published On :
ಗುರುಗ್ರಾಮ: ಕುಡಿದು ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ ಒಬ್ಬರಿಗೆ ಡಿಕ್ಕಿ ಹೊಡೆದು ಬಳಿಕ ಅವರ ದೇಹವನ್ನು 100 ಮೀಟರ್ ವರೆಗೂ ಎಳೆದೊಯ್ದಿರುವ ಘಟನೆ ಗುರುಗ್ರಾಮದ ಸೆಕ್ಟರ್ 29ರನಲ್ಲಿ ನಡೆದಿದೆ. 
ಮಿಲೇನಿಯಂ ಸಿಟಿಯಲ್ಲಿ ಬುಧವಾರ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ವಾಹನವನ್ನು ಅಡ್ಡದಾರಿಯಲ್ಲಿ ಚಾಲನೆ ಮಾಡುತ್ತಿದ್ದ. ಈ ವೇಳೆ ಆತನನ್ನು ಸಂಚಾರಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರನ್ನು ನಿಲ್ಲಿಸದ ಪಾನಮತ್ತ ವ್ಯಕ್ತಿ ಕಾರನ್ನೇ ಪೊಲೀಸರ ಮೇಲೆ ಹತ್ತಿಸಿದ್ದಾನೆ. ಬಳಿಕ ಪೊಲೀಸ್'ನನ್ನು 100 ಮೀಟರ್ ಗಳವರೆಗೂ ಎಳೆದೊಯ್ದಿದ್ದಾನೆ. 
ಘಟನೆ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ದೆಹಲಿ ಮೂಲದ ನಿವಾಸಿಯೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.