ದೇಶ

'ಇಟ್ಸ್ ಡನ್': ರಾಜಸ್ಥಾನ ರೈತರ ಸಾಲ ಮನ್ನಾ ಕುರಿತು ರಾಹುಲ್ ಟ್ವೀಟ್

ಚುನಾವಣಾ ಪ್ರಚಾರದ ವೇಳೆ ನೀಡಲಾಗಿದ್ದ ಭರವಸೆಯಂತೆಯೇ ಕಾಂಗ್ರೆಸ್ ನಡೆಯುತ್ತಿದ್ದು, ಇದರಂತೆ ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದ ಕಾಂಗ್ರೆಸ್ ಇದೀಗ...

'ಇಟ್ಸ್ ಡನ್': ರಾಜಸ್ಥಾನ ರೈತರ ಸಾಲ ಮನ್ನಾ ಕುರಿತು ರಾಹುಲ್ ಟ್ವೀಟ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Published On :
ಜೈಪುರ: ಚುನಾವಣಾ ಪ್ರಚಾರದ ವೇಳೆ ನೀಡಲಾಗಿದ್ದ ಭರವಸೆಯಂತೆಯೇ ಕಾಂಗ್ರೆಸ್ ನಡೆಯುತ್ತಿದ್ದು, ಇದರಂತೆ ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದ ಕಾಂಗ್ರೆಸ್ ಇದೀಗ ರಾಜಸ್ಥಾನದಲ್ಲಿಯೂ ರೈತರ ಸಾಲ ಮನ್ನಾ ಮಾಡಿರುವುದಾಗಿ ಗುರುವಾರ ಘೋಷಣೆ ಮಾಡಿದೆ.
ರಾಜಸ್ಥಾನದಲ್ಲಿ ರೈತರ ಸಾಲ ಮನ್ನಾ ಮಾಡಿರುವ ಕುರಿತಂತೆ ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಇಟ್ಸ್ ಡನ್ ( ನಾವು ಮಾಡಿದೆವು). ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಸಾಲ ಮನ್ನಾ ಮಾಡಲು ನಾವು 10 ದಿನಗಳ ಕಾಲಾವಕಾಶ ಕೇಳಿದ್ದೆವು. ಆದರೆ, 2 ದಿನಗಳಲ್ಲಿಯೇ ಸಾಲ ಮನ್ನಾ ಮಾಡಿದ್ದೇವೆಂದು ಹೇಳಿದ್ದಾರೆ. 
ಈ ಹಿಂದೆ ಅಶೋಕ್ ಗೆಲ್ಹೋಟ್ ನೇತೃತ್ವದ ಸರ್ಕಾರ ಸಾಲ ಮನ್ನಾ ಮಾಡಲು 10 ದಿನಗಳ ಕಾಲಾವಕಾಶ ಕೇಳಿತ್ತು. ರೈತರ ರೂ.2 ಲಕ್ಷದವರೆಗಿನ ಸಾಲವನ್ನು ಸರ್ಕಾರ ಮನ್ನಾ ಮಾಡಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.