ದೇಶ

ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ನಿರ್ಧರಿಸಲು ಇದು ಸಕಾಲವಲ್ಲ: ಸ್ಟಾಲಿನ್ ಹೇಳಿಕೆಗೆ ಮಮತಾ ಬ್ಯಾನರ್ಜಿ

ನಾವು ಒಬ್ಬಂಟಿಯಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಒಮ್ಮತ ನಿರ್ಧಾರ ತೆಗೆದುಕೊಂಡರೆ,

ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ನಿರ್ಧರಿಸಲು ಇದು ಸಕಾಲವಲ್ಲ: ಸ್ಟಾಲಿನ್ ಹೇಳಿಕೆಗೆ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Published On :
ಕೋಲ್ಕತಾ: ನಾವು ಒಬ್ಬಂಟಿಯಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಒಮ್ಮತ ನಿರ್ಧಾರ ತೆಗೆದುಕೊಂಡರೆ, ಅದಕ್ಕೆ ನಾವೂ ಬೆಂಬಲ ನೀಡುತ್ತೇವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೇಳಿದ್ದಾರೆ. 
ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಮಂತ್ರಿ ಅಭ್ಯರ್ಥಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನಾವು ಒಬ್ಬಂಟಿಯಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳು ಯಾವುದೇ ರೀತಿಯ ನಿರ್ಧಾರ ಕೈಗೊಂಡಲೂ ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ, ಪ್ರಧಾನಮಂತ್ರಿ ಅಭ್ಯರ್ಥಿ ಕುರಿತು ಮಾತನಾಡಲು ಇದು ಸಕಾಲವಲ್ಲ. ಉತ್ತಮ ಬದಲಾವಣೆಗಾಗಿ ಭರವಸೆಗಳನ್ನಿಡೋಣ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮಹಾಮೈತ್ರಿಕೂಟದ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂಬ ಯಕ್ಷಪ್ರಶ್ನೆಗೆ ಉತ್ತರ ನೀಡಿದ್ದ ತಮಿಳುನಾಡಿನ ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್ ಅವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಅವರೇ ಮಹಾಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.