ಆತ್ಮಹತ್ಯೆಗೆ ಶರಣಾದ ಗರ್ಭಿಣಿ, ಗರ್ಭದಲ್ಲಿದ್ದ ನವಜಾತ ಶಿಶುವನ್ನು ರಕ್ಷಿಸಿದ ಮಹಿಳಾ ಎಸ್ಐ!
ತುಂಬು ಗರ್ಭಿಣಿಯೋರ್ವಳು ಮನೆಯಲ್ಲಿದ್ದ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರೂ ಗರ್ಭದಲ್ಲಿದ್ದ ನವಜಾತ ಶಿಶುವನ್ನು ರಕ್ಷಣೆ ಮಾಡುವಲ್ಲಿ ಮಹಿಳಾ ಪೊಲೀಸ್...

Published On :
ಇಂದೋರ್: ತುಂಬು ಗರ್ಭಿಣಿಯೋರ್ವಳು ಮನೆಯಲ್ಲಿದ್ದ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರೂ ಗರ್ಭದಲ್ಲಿದ್ದ ನವಜಾತ ಶಿಶುವನ್ನು ರಕ್ಷಣೆ ಮಾಡುವಲ್ಲಿ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಯಶಸ್ವಿಯಾಗಿದ್ದಾರೆ.
ಸಂತೋಷ್ ಸಿಂಗ್ ಅವರ 36 ವರ್ಷದ ಪತ್ನಿ ಲಕ್ಷ್ಮಿ ಬಾಯಿ ಇಲ್ಲಿನ ದುರ್ಗಾ ಚೌಕ್ ನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪಕ್ಕದ ಮನೆಯವರು ಪೊಲೀಸ್ ಠಾಣೆಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಮಹಿಳಾ ಎಸ್ಐ ಕವಿತಾ ಸಹಿನ್ ತಕ್ಷಣ ಆಕೆಯ ಗರ್ಭದಿಂದ ಮಗುವಿನ ಕಾಲು ಹೊರ ಬಂದು ಮಗು ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ. ತಕ್ಷಣ ಮಗುವನ್ನು ಹೊರ ತೆಗೆದು ಆ್ಯಂಬುಲೆನ್ಸ್ ಗೆ ಕಾಲ್ ಮಾಡಿದ್ದಾರೆ.
ನವಜಾತ ಶಿಶುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಶಿಶು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶಿಶುಆತ್ಮಹತ್ಯೆBabyMadhya Pradeshcommits suicideಮಧ್ಯಪ್ರದೇಶPregnant womenಮಹಿಳಾ ಪೊಲೀಸ್ಗರ್ಭೀಣಿ ಮಹಿಳೆWoman cop
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


