ದೇಶ

ನೋಯ್ಡಾ: ಲೈಂಗಿಕ ಕಿರುಕುಳ ಆರೋಪ, ನೊಂದ ಟೆಕ್ಕಿ ಆತ್ಮಹತ್ಯೆಗೆ ಶರಣು

ಕಚೇರಿಯಲ್ಲಿ ಸಹೋದ್ಯೋಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದ ಜೆನ್‌ ಪ್ಯಾಕ್ಟ್ ಐಟಿ...

ನೋಯ್ಡಾ: ಲೈಂಗಿಕ ಕಿರುಕುಳ ಆರೋಪ, ನೊಂದ ಟೆಕ್ಕಿ ಆತ್ಮಹತ್ಯೆಗೆ ಶರಣು
ಸ್ವರೂಪ್‌ ರಾಜ್‌
Published On :
ನೋಯ್ಡಾ: ಕಚೇರಿಯಲ್ಲಿ ಸಹೋದ್ಯೋಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದ ಜೆನ್‌ ಪ್ಯಾಕ್ಟ್ ಐಟಿ ಕಂಪನಿಯ ಸಹಾಯಕ ಉಪಾಧ್ಯಕ್ಷ ಸ್ವರೂಪ್‌ ರಾಜ್‌ ಅವರು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಬ್ಬರು ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸ್ವರೂಪ್ ಅವರನ್ನು ಸಹಾಯಕ ಉಪಾಧ್ಯಕ್ಷ ಹುದ್ದೆಯಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿತ್ತು. 
ಲೈಂಗಿಕ ಕಿರುಕುಳ ಆರೋಪದಿಂದ ನೊಂದ 35 ವರ್ಷದ ಸ್ವರೂಪ್ ಅವರು ಇಂದು ನೋಯ್ಡಾದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನನ್ನ ವಿರುದ್ಧ ಮಾಡಲಾಗಿರುವ ಆರೋಪಗಳು ಸುಳ್ಳು ಮತ್ತು ನಿರಾಧಾರ. ಅದನ್ನು ಎದುರಿಸುವ ಧೈರ್ಯ ನನ್ನಲ್ಲಿಲ್ಲ ಎಂದು ಸ್ವರೂಪ್‌ ತಮ್ಮ ಡೆತ್‌ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ ಎಂದು ಗೌತಮ್ ಬುದ್ಧ ನಗರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಪಾಲ್ ಶರ್ಮಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.