ದೇಶ

2019ರಲ್ಲಿ ಪ್ರಧಾನಿ ಅಭ್ಯರ್ಥಿಯಾಗುವ ಆಸಕ್ತಿ ಇಲ್ಲ: ನಿತಿನ್ ಗಡ್ಕರಿ

2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುವ ಆಸಕ್ತಿ ನನಗೆ ಇಲ್ಲ. ನಾನು ಈಗ ಹೊಂದಿರುವ....

2019ರಲ್ಲಿ ಪ್ರಧಾನಿ ಅಭ್ಯರ್ಥಿಯಾಗುವ ಆಸಕ್ತಿ ಇಲ್ಲ: ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Published On :
ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುವ ಆಸಕ್ತಿ ನನಗೆ ಇಲ್ಲ. ನಾನು ಈಗ ಹೊಂದಿರುವ ಹುದ್ದೆಯಲ್ಲೇ ಖುಷಿಯಾಗಿದ್ದೇನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಹೇಳಿದ್ದಾರೆ.
2019ರ ಚುನಾವಣೆ ಗೆಲ್ಲಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಬದಲು ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡಿ ಎಂದು ಮಹಾರಾಷ್ಟ್ರ ಸರ್ಕಾರಿ ಸಂಸ್ಥೆಯೊಂದರ ಮುಖ್ಯಸ್ಥ ಆರ್ ಎಸ್ಎಸ್ ಗೆ ಪತ್ರ ಬರೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿದ ಗಡ್ಕರಿ ಅವರು, ಅಂತಹ ಯಾವುದೇ ಸಾಧ್ಯತೆ ಇಲ್ಲ. ನಾನು ಈಗ ಸಂತೋಷವಾಗಿದ್ದೇನೆ. ನಾನು ಮೊದಲು ಗಂಗಾ ಯೋಜನೆಯನ್ನು ಪೂರ್ಣಗೊಳಿಸಬೇಕು, 13-14 ರಾಷ್ಟ್ರಗಳಿಗೆ ಸಂಪರ್ಕ ಕಲ್ಪಿಸುವ ಎಕ್ಸ್ ಪ್ರೆಸ್ ಹೆದ್ದಾರಿ ಮತ್ತು ಚಾರ್ ಧಾಮ್ ಗಳಿಗೆ ರಸ್ತೆ ನಿರ್ಮಿಸಬೇಕು ಎಂದು ಹೇಳಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಈ ಹಿಂದಿನ ಸರ್ಕಾರಗಳು ಅಭಿವೃದ್ಧಿಯನ್ನು ಕಡೆಗಣಿಸಿದ್ದವು. ಈಗ ನಮ್ಮ ಸರ್ಕಾರ ಅಲ್ಲಿ 9,533 ಕೋಟಿ ರುಪಾಯಿ ಮೌಲ್ಯದ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.