ದೇಶ

ಅತ್ಯಾಚಾರ ಪ್ರಕರಣ: ಆರ್ಜೆಡಿ ಶಾಸಕ ರಾಜ್ ಬಲ್ಲಭ್ ಪ್ರಸಾದ್ ಗೆ ಜೀವಾವಧಿ ಶಿಕ್ಷೆ

ಸಂಸದರು ಹಾಗೂ ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಆಲಿಸುವ ವಿಶೇಷ ನ್ಯಾಯಾಲಯ ಇಂದು (ಶುಕ್ರವಾರ) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟಿಸಿದ್ದು ಅಮಾನತುಗೊಂಡಿದ್ದ ಆರ್ಜೆಡಿ....

ಅತ್ಯಾಚಾರ ಪ್ರಕರಣ: ಆರ್ಜೆಡಿ ಶಾಸಕ ರಾಜ್ ಬಲ್ಲಭ್ ಪ್ರಸಾದ್ ಗೆ ಜೀವಾವಧಿ ಶಿಕ್ಷೆ
ರಾಜ್ ಬಲ್ಲಭ್ ಪ್ರಸಾದ್ ಯಾದವ್
Published On :
ಪಾಟ್ನಾ: ಸಂಸದರು ಹಾಗೂ ಶಾಸಕರ  ವಿರುದ್ಧ ಕ್ರಿಮಿನಲ್ ಮೊಕದ್ದಮೆ ಆಲಿಸುವ ವಿಶೇಷ ನ್ಯಾಯಾಲಯ ಇಂದು (ಶುಕ್ರವಾರ) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟಿಸಿದ್ದು ಅಮಾನತುಗೊಂಡಿದ್ದ ಆರ್ಜೆಡಿ ಶಾಸಕ ರಾಜ್ ಬಲ್ಲಭ್ ಪ್ರಸಾದ್ ಯಾದವ್ ಹಾಗೂ ಇನ್ನಿಬ್ಬರಿಗೆ ಜೀವಾವಧಿ ಶಿಕ್ಷೆ  ವಿಧಿಸಿದೆ. ಇದೇ ಪ್ರಕರಣದಲ್ಲಿ ಭಾಗಿಗಳಾಗಿದ್ದ ಇನ್ನೂ ಮೂವರಿಗೆ  10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವಿಶೇಷ ನ್ಯಾಯಾಧೀಶ ಪರಶುರಾಂ ಸಿಂಗ್ ಯಾದವ್ ಈ ತೀರ್ಪು ಪ್ರಕಟಿಸಿದ್ದು ಶಾಸಕ ಯಾದವ್ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಕೋಸ್ಕೋ) ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಿದ್ದಾರೆ. ಅಲ್ಲದೆ 50,000 ದಂಡ ವಿದಿಸಲಾಗಿದೆ.
ಸುಲೇಖಾ ದೇವಿ ಹಾಗೂ ರಾಧಾದೇವಿ ಎಂಬ ಇನ್ನಿಬ್ಬರು ಅಪರಾಧಿಗಳಿಗೆ ಸಹ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.