ವಿವಿಐಪಿ ಕ್ಯಾಪ್ಟರ್ ಹಗರಣ: ಕ್ರಿಶ್ಚಿಯನ್ ಮೈಕೆಲ್ ಏಳು ದಿನ ಇಡಿ ವಶಕ್ಕೆ
ದುಬೈ ನಿಂದ ಗಡಿಪಾರಾಗಿ ಭಾರತಕ್ಕೆ ಬಂದಿರುವ ಬಹುಕೋಟಿ ವಿವಿಐಪಿ ಕ್ಯಾಪ್ಟರ್ ಹಗರಣದ ಪ್ರಮುಖ ಆರೋಪಿ...

Published On :
ನವದೆಹಲಿ: ದುಬೈ ನಿಂದ ಗಡಿಪಾರಾಗಿ ಭಾರತಕ್ಕೆ ಬಂದಿರುವ ಬಹುಕೋಟಿ ವಿವಿಐಪಿ ಕ್ಯಾಪ್ಟರ್ ಹಗರಣದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಅವರನ್ನು ದೆಹಲಿ ಕೋರ್ಟ್ ಶನಿವಾರ ಏಳು ದಿನ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಕ್ರಿಶ್ಚಿಯನ್ ಮೈಕೆಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿಯನ್ನು ಏಳು ದಿನ ಇಡಿ ವಶಕ್ಕೆ ನೀಡಿದ್ದಾರೆ.
ಕ್ರಿಶ್ಚಿಯನ್ ಮೈಕೆಲ್ ಅವರನ್ನು ವಿಚಾರಣೆಗಾಗಿ 15 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಆದರೆ ಕೋರ್ಟ್ ಏಳು ಮಾತ್ರ ಇಡಿ ವಶಕ್ಕೆ ನೀಡಿದೆ.
12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ಪಿ ತ್ಯಾಗಿ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಒಪ್ಪಂದದಿಂದ ಸರ್ಕಾರದ ಖಜಾನೆಗೆ 2,666 ಕೋಟಿ ರೂ ನಷ್ಟವಾಗಿದೆ ಎಂದು ಆರೋಪಿಸಿದೆ.
ಈ ಒಪ್ಪಂದವು ಸಾಕಾರಗೊಳ್ಳಲು ನೆರವಾಗುವ ಕಾರ್ಯಕ್ಕೆ ಅಗಸ್ಟವೆಸ್ಟ್ಲ್ಯಾಂಡ್ ಸಂಸ್ಥೆಯಿಂದ ಕ್ರಿಶ್ಚಿಯನ್ ಮೈಕೆಲ್ ಸುಮಾರು 225 ಕೋಟಿ ರು. ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Delhi Courtದೆಹಲಿ ಕೋರ್ಟ್ED custodyಇಡಿ ವಶಕ್ಕೆChristian Michelಕ್ರಿಶ್ಚಿಯನ್ ಮೈಕೆಲ್ವಿವಿಐಪಿ ಕ್ಯಾಪ್ಟರ್ ಹಗರಣVVIP chopper case
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


