ಮುಂಬೈ: ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರು ದುರ್ಮರಣ, 8 ಗಾಯ
ವಾಣಿಜ್ಯ ರಾಜಧಾನಿ ಮುಂಬೈನ ಗೊರೆಗಾಂವ್ ನ ಅಜಾದ್ ಮೈದಾನದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಮೂವರು ಮೃತಪಟ್ಟ, ಹಲವು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನ ಗೊರೆಗಾಂವ್ ನ ಅಜಾದ್ ಮೈದಾನದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಮೂವರು ಮೃತಪಟ್ಟ, ಹಲವು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಮೊತಿಲಾಲ್ ನಗರದಲ್ಲಿರುವ ಮೂರು ಅಂತಸ್ತಿನ ಮಹದ್ ಚವ್ಹಾ ಕಟ್ಟಡ ಇಂದು ಬೆಳಗ್ಗೆ ಹಠಾತ್ತನೆ ಕುಸಿತಗೊಂಡಿದೆ. ಇದರಿಂದಾಗಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ ರಾಮು ಎಂಬುವನನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಬದುಕುಳಿಯಲಿಲ್ಲ ಎಂಬುದು ತಿಳಿದುಬಂದಿದೆ. ಇನ್ನೂ ಇಬ್ಬರು ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಿದ್ದಾರ್ಥ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಾಳುಗಳ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನಿರ್ಮಾಣ ಹಂತದ ಕಟ್ಟಡ ಕುಸಿತಕ್ಕೆ ಕಾರಣ ಏನು ಎಂಬುದು ಇನ್ನೂ ದೃಢಪಟ್ಟಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


