ಬಿಜೆಪಿ ಹೊರತು ಬೇರಾರಿಂದಲೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವಿಲ್ಲ: ಯೋಗಿ ಆದಿತ್ಯನಾಥ್
ಬಿಜೆಪಿಯಿಂದ ಮಾತ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯ.ಬೇರೆ ಯಾವ ಪಕ್ಷದಿಂಡಲೂ ಕಟ್ಟಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Published On :
ಲಖನೌ: ಬಿಜೆಪಿಯಿಂದ ಮಾತ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯ.ಬೇರೆ ಯಾವ ಪಕ್ಷದಿಂಡಲೂ ಕಟ್ಟಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಭಾನುವಾರ ಲಖನೌ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಎರಡು ದಿನಗಳ ಯುವ ಕುಂಭ್ (ಯುವ ಸಭೆ)ಉದ್ಘಾಟನೆ ಮಾಡಿ ಅವರು ಮಾತನಾಡುತ್ತಿದ್ದರು."ಅಯೋಧ್ಯೆಯಲ್ಲಿ ರಾಮಮಂದಿರ ಬಿಜೆಪಿಯಿಂದ ಮಾತ್ರವೇ ಸಾಧ್ಯ. ಅದರಲ್ಲಿ ಯಾವ ಸಂದೇಹ ಬೇಡ.ಬೇರೆ ಯಾವ ಪಕ್ಷವೂ ಇದನ್ನು ಮಾಡಲು ಸಾಧ್ಯವಿಲ್ಲ" ಅವರು ಹೇಳಿದ್ದಾರೆ.
ಯುವ ಜನತೆ ಹೆಚ್ಚಿದ್ದ ಕಾರ್ಯಕ್ರಮದಲ್ಲಿ "ಯಾರು ಮಂದಿರ ನಿರ್ಮಿಸುವರೋ ಅವರಿಗಷ್ಟೇ ಮತ" ಎಂದು ಘೊಷಣೆ ಕೂಗಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕುರಿತು ಕಿಡಿ ಕಾರಿದ ಯೋಗಿ ಶ್ರೀರಾಮ, ಕೃಷ್ಣರ ಅಸ್ತಿತ್ವವನ್ನು ಪ್ರಶ್ನಿಸಿದವರು ಇಂದು ಮತಕ್ಕಾಗಿ ಜನಿವಾರವನ್ನು ಪ್ರದರ್ಶಿಸುತ್ತಿದ್ದಾರೆ ಅಂತಹವರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವೆಂಬ ಯಾವ ನಿರೀಕ್ಷೆಯೂ ಬೇಡ ಎಂದಿದ್ದಾರೆ.
ರಾಜಸ್ಥಾನ, ಛತ್ತೀಸ್ ಗಢ ಹಾಗೂ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ರಾಮಮಂದಿರ ವಿಚಾರವನ್ನು ತಮ್ಮ ಭಾಷಣದಲ್ಲಿ ಮುಖ್ಯವಾಗಿ ಪ್ರಸ್ತಾಪಿಸಿದ್ದಾರೆ.
"ಇತಿಹಾಸಕಾರರು ನಮಗೆ ತಪ್ಪು ಮಾಹಿತಿ ನೀಡುತ್ತಿದ್ದರು, ಅದನ್ನು ತಿದ್ದಿ ಸರಿಯಾದ ಇತಿಹಾಸ ಬರೆಯುವ ಹೊಣೆಗಾರಿಕೆ ನಮ್ಮ ಮೇಲಿದೆ.ರಾಮಾಯಣದ ಪುಷ್ಪಕ ವಿಮಾನ ಸತ್ಯವಾಗಿದೆ, ಮಹರ್ಷಿ ಭಾರದ್ವಾಜರು ವೈಮಾನಿಕ ಶಾಸ್ತ್ರವನ್ನು ರಚಿಸಿದ್ದು ಇದರಲ್ಲಿ ಪುಷ್ಪಕ ವಿಮಾನದ ಸಿದ್ದಾಂತವಿದೆ"
ಪ್ರಯಾಗ್ ರಾಜ್ ನ ಮಹಾಕುಂಭಮೇಳವನ್ನು ಯುವ ವಿರೋಧಿ, ಮಹಿಳಾ ವಿರೋಧಿ, ದಲಿತ ವಿರೋಧಿ ಎಂದೆಲ್ಲಾ ಬಿಂಬಿಸಲಾಗುತ್ತಿದೆಾದರೆ ಈ ಕುಂಭಮೇಳವು ಭಾರತೀಯ ಸಂಸ್ಕೃತಿಯನ್ನು ವಿಶ್ವ ಮಟ್ಟದಲ್ಲಿ ಪ್ರತಿಬಿಂಬಿಸಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಜನವರಿ ಹದಿನೈದರಿಂದ ಮಾರ್ಚ್ ನಾಲ್ಕರವರೆಗೆ ಪ್ರಯಾಗ್ ರಾಜ್ ಮಹಾಕುಂಭಮೇಳ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


