ನಿಮ್ಮದೆಷ್ಟಿದೆಯೋ ಅಷ್ಟು ನೋಡ್ಕೊಳಿ; ಪಾಕ್ ಪ್ರಧಾನಿಗೆ ನಾಸಿರುದ್ದೀನ್ ಶಾ ತಿರುಗೇಟು!
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಅಲ್ಪ ಸಂಖ್ಯಾತರನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂದು ತಾವು ತೋರಿಸುತ್ತೇವೆ ಎಂದು ಹೇಳಿದ್ದ ಪಾಕ್ ಪ್ರಧಾನಿ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಅಲ್ಪ ಸಂಖ್ಯಾತರನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂದು ತಾವು ತೋರಿಸುತ್ತೇವೆ ಎಂದು ಹೇಳಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ನಟ ನಾಸಿರುದ್ದೀನ್ ಶಾ ತಿರುಗೇಟು ನೀಡಿದ್ದಾರೆ.
ಇಮ್ರಾನ್ ಖಾನ್ ಬೇರೆ ದೇಶದ ಬಗ್ಗೆ ಟೀಕೆ ಮಾಡಲು ಬದಲು, ನೀವು ನಿಮ್ಮ ದೇಶದ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ. ನಮ್ಮ ದೇಶದ ಸಮಸ್ಯೆಗಳನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ ಎಂದು ನಾಸಿರುದ್ದೀನ್ ಶಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಭಾರತ 70 ವರ್ಷಗಳಿಂದ ಪ್ರಜಾಪ್ರಭುತ್ವ ರಾಷ್ಟವಾಗಿದೆ. ನಮಗೆ ನಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ದಾರಿ ಗೊತ್ತಿದೆ ಎಂದು ಸಂದರ್ಶನವೊಂದರಲ್ಲಿ ನಾಸಿರುದ್ದೀನ್ ಹೇಳಿದ್ದಾರೆ.
ಬುಲಂದರ್ ಶೆಹರ್ ನಲ್ಲಿ ಗೋಹತ್ಯೆ ಸಂಬಂಧ ಶುರವಾದ ಗಲಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಮಾತನಾಡಿದ್ದ ನಾಸಿರುದ್ದೀನ್ ಶಾ ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಇಮ್ರಾನ್ ಖಾನ್Imran KhanPakistanಪಾಕಿಸ್ತಾನNaseeruddin Shahನಾಸಿರುದ್ದೀನ್ ಶಾMinorities Remarkಅಲ್ಪಸಂಖ್ಯಾತ ಹೇಳಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


