ಕಾವಲುಗಾರರು ಕಳ್ಳರಾಗಿದ್ದಾರೆ: ಕಾಂಗ್ರೆಸ್ ಘೋಷಣೆಗೆ ಧ್ವನಿಗೂಡಿಸಿದ ಶಿವಸೇನೆ!
ಶಿವಸೇನೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾವಲುಗಾರರು ಕಳ್ಳರಾಗಿದ್ದಾರೆ ಎಂಬ ಕಾಂಗ್ರೆಸ್ ಘೋಷಣೆಗೆ ಧ್ವನಿಗೂಡಿಸಿದೆ.

Published On :
ಸೋಲಾಪುರ: ಶಿವಸೇನೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾವಲುಗಾರರು ಕಳ್ಳರಾಗಿದ್ದಾರೆ ಎಂಬ ಕಾಂಗ್ರೆಸ್ ಘೋಷಣೆಗೆ ಧ್ವನಿಗೂಡಿಸಿದೆ.
ರಕ್ಷಣೆ, ಕೃಷಿ ಕ್ಷೇತ್ರಗಳಲ್ಲಿ ಹಗರಣಗಳು ನಡೆದಿವೆ, ಉಳಿದಂತೆ 15 ಲಕ್ಷ ಪ್ರತಿಯೊಬ್ಬರ ಖಾತೆಗೆ ಹಾಗೂ ರಾಮ ಮಂದಿರ ನಿರ್ಮಾಣದಂತಹ ಭರವಸೆಗಳು ಸುಳ್ಳಾಗಿವೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೋಲಾಪುರ ಜಿಲ್ಲೆಯ ಪಂಡರಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಶಿವಸೇನೆ ಮುಖಂಡ ಚುನಾವಣೆ ಸಂದರ್ಭದಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆ ನೀಡಿ ಅಧಿಕಾರಕ್ಕೆ ಬಂದ ನಂತರ ಏನನ್ನೂ ಮಾಡದೇ ಇರುವುದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮಮಂದಿರ ನಿರ್ಮಾಣವಾಗುವವರೆಗೆ ನಾವು ವಿರಮಿಸುವುದಿಲ್ಲ ಎಂದಿದ್ದು ಬಿಜೆಪಿಗೂ ಎಚ್ಚರಿಕೆ ನೀಡಿದ್ದಾರೆ. " ರಾಮ ಮಂದಿರ ನಿರ್ಮಾಣ ಮಾಡಿ ಇಲ್ಲವೇ ಮನೆಯಲ್ಲಿಯೇ ಉಳಿಯಬೇಕಾಗುತ್ತದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


