ತೆರಿಗೆ ಸಂಗ್ರಹ ಹೆಚ್ಚುತ್ತಿದ್ದಂತೆಯೇ ಜಿಎಸ್ ಟಿ ದರ ಗರಿಷ್ಠ 12-18ಕ್ಕೆ ನಿಗದಿ: ಅರುಣ್ ಜೇಟ್ಲಿ
ಜಿಎಸ್ ಟಿ ಜಾರಿಗೊಂಡ 18 ತಿಂಗಳಲ್ಲೇ ಸರ್ಕಾರ ಐಷಾರಾಮಿ ವಸ್ತುಗಳನ್ನು ಶೇ.28 ರ ತೆರಿಗೆ ವ್ಯಾಪ್ತಿಗೆ ತರುವ ಮೂಲಕ ಮೊದಲ ಹಂತದ ಸುಧಾರಣೆಗಳನ್ನು ಪೂರ್ಣಗೊಳಿಸುವ ಸನಿಹದಲ್ಲಿದೆ ಎಂದು ವಿತ್ತ ಸಚಿವ ಅರುಣ್

Published On :
ನವದೆಹಲಿ: ಜಿಎಸ್ ಟಿ ಜಾರಿಗೊಂಡ 18 ತಿಂಗಳಲ್ಲೇ ಸರ್ಕಾರ ಐಷಾರಾಮಿ ವಸ್ತುಗಳನ್ನು ಶೇ.28 ರ ತೆರಿಗೆ ವ್ಯಾಪ್ತಿಗೆ ತರುವ ಮೂಲಕ ಮೊದಲ ಹಂತದ ಸುಧಾರಣೆಗಳನ್ನು ಪೂರ್ಣಗೊಳಿಸುವ ಸನಿಹದಲ್ಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಜಿಎಸ್ ಟಿ ಸುಧಾರಣೆಗಳ ಬಗ್ಗೆ ಫೇಸ್ ಬುಕ್ ನಲ್ಲಿ ಸುದೀರ್ಘವಾಗಿ ಲೇಖನ ಬರೆದಿರುವ ಜೇಟ್ಲಿ, ತೆರಿಗೆ ಸುಧಾರಣೆಗಳು ಹೆಚ್ಚುತ್ತಿದ್ದು, ಭಾರತದಲ್ಲಿ ಸಾಮಾನ್ಯವಾಗಿ ಬಳಕೆ ಮಾಡುವ ಸರಕುಗಳು 0-5 ಶೇ. ಹಾಗೂ 12-18 ಶೇ. ಜಿಎಸ್ ಟಿ ಸ್ಲ್ಯಾಬ್ ವ್ಯಾಪ್ತಿಗೆ ಬರಲಿವೆ ಎಂದು ಮಾಹಿತಿ ನೀಡಿದ್ದಾರೆ.
ಐಷಾರಾಮಿ ಮತ್ತು ಆರೋಗ್ಯಕ್ಕೆ ಹಾನಿಕರವಾದ ಮತ್ತು ದುಶ್ಚಟ ಎಂದು ಪರಿಭಾವಿಸಲಾದ ಸರಕುಗಳು ಮಾತ್ರ ಹೆಚ್ಚಿನ ತೆರಿಗೆ ವ್ಯಾಪ್ತಿಗೆ ಬರಲಿದೆ. 1,216 ಸರಕುಗಳ ಪೈಕಿ 183 ಸರಕುಗಳಿಗೆ ಶೂನ್ಯ ತೆರಿಗೆ 308 ಕ್ಕೆ ಶೇ.5 ರಷ್ಟು ತೆರಿಗೆ, 178 ಕ್ಕೆ ಶೇ.12 ರಷ್ಟು ತೆರಿಗೆ, 517 ಕ್ಕೆ ಶೇ.18 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 12-18 ತೆರಿಗೆ ನಡುವೆ ಹಂಚಿಹೋಗಿರುವ ಸರಕುಗಳನ್ನು ಒಂದೇ ಮಾದರಿಯ ತೆರಿಗೆ ವ್ಯಾಪ್ತಿಗೆ ತರಲಾಗುತ್ತದೆ. ಅಂತಿಮವಾಗಿ ಭಾರತದಲ್ಲಿ ಸಮಾನ್ಯವಾಗಿ ಬಳಕೆ ಮಾಡುವ ಸರಕುಗಳ ತೆರಿಗೆ 0-5 ರಷ್ಟಿರಲಿದ್ದು, ಐಷಾರಾಮಿ ಮತ್ತು ಆರೋಗ್ಯಕ್ಕೆ ಹಾನಿಕರವಾದ ಮತ್ತು ದುಶ್ಚಟ ಎಂದು ಪರಿಭಾವಿಸಲಾದ ಸರಕುಗಳು ಒಂದು ನಿರ್ದಿಷ್ಟ ತೆರಿಗೆ ವ್ಯಾಪ್ತಿಗೆ ಒಳಪಡುವಂತೆ ಮಾಡಲಾಗುವುದು ಎಂದು ಜೇಟ್ಲಿ ಹೇಳಿದ್ದಾರೆ.
ಸಿಮೆಂಟ್ ಮತ್ತೆ ಆಟೋಮೊಬೈಲ್ ಬಿಡಿಭಾಗಗಳು ಮಾತ್ರ ಶೇ.28 ರ ತೆರಿಗೆ ವ್ಯಾಪ್ತಿಯಲ್ಲಿ ಉಳಿದಿರುವ ಸಾಮಾನ್ಯವಾಗಿ ಬಳಕೆ ಮಾಡುವ ಸರಕುಗಳಾಗಿದ್ದು, ಸಿಮೆಂಟ್ ನ್ನು ಕಡಿಮೆ ಸ್ಲ್ಯಾಬ್ ಗೆ ಇಳಿಸುವುದು ಮುಂದಿನ ಆದ್ಯತೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧವೂ ಆರೋಪ ಮಾಡಿದ್ದು, ಭಾರತದ ಮೇಲೆ ಶೇ.31 ರಷ್ಟು ಪರೋಕ್ಷ ತೆರಿಗೆ ಹೇರಿದ್ದವರು ಈಗ ಆತ್ಮಾವಲೋಕನ ಮಾಡಿಕೊಳ್ಳಲೇಬೇಕು ಎಂದು ಹೇಳಿದ್ದಾರೆ. ಜಿಎಸ್ ಟಿ ಕುರಿತಂತೆ ಸಾಕಷ್ಟು ಟೀಕೆ, ಅಪಪ್ರಚಾರ ನಡೆಯುತ್ತಿದೆ. ಶೇ.31 ರಷ್ಟು ಪರೋಕ್ಷ ತೆರಿಗೆ ವಿಧಿಸಿದ್ದವರು ಹಾಗೂ ಜಿಎಸ್ ಟಿ ಯನ್ನು ಸತತವಾಗಿ ವಿರೋಧಿಸುತ್ತಿದ್ದವರು ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಗೆ ಫೇಸ್ ಬುಕ್ ನಲ್ಲಿ ಜೇಟ್ಲಿ ಬರೆದಿದ್ದಾರೆ.
23 ಸರಕುಗಳ ತೆರಿಗೆಯನ್ನು ಕಡಿಮೆ ಮಾಡಿದ ಜಿ ಎಸ್ ಟಿ ಕೌನ್ಸಿಲ್ ಸಭೆಯ ಬೆನ್ನಲ್ಲೇ ಅರುಣ್ ಜೇಟ್ಲಿ ಫೇಸ್ ಬುಕ್ ನಲ್ಲಿ ಜಿಎಸ್ ಟಿ ಸುಧಾರಣೆಗಳ ಬಗ್ಗೆ ಬರೆದಿದ್ದಾರೆ. ಪರಿಷ್ಕೃತ ದರಗಳು ಜನವರಿ 1 ರಿಂದ ಜಾರಿಗೆ ಬರಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


