ಅಯೋಧ್ಯೆ ವಿವಾದ: ಜನವರಿ 4ರಿಂದ ಸುಪ್ರೀಂ ಕೋರ್ಟ್ ವಿಚಾರಣೆ ಪ್ರಾರಂಭ
ರಾಮಜನ್ಮಭೂಮಿ, ಅಯೋಧ್ಯೆ ವಿವಾದದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠಜನವರಿ 4ರಿಂದ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

Published On :
ನವದೆಹಲಿ: ರಾಮಜನ್ಮಭೂಮಿ, ಅಯೋಧ್ಯೆ ವಿವಾದದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠ ಜನವರಿ 4ರಿಂದ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಅಯೋಧ್ಯೆ ವಿವಾದದ ವಿಚಾರಣೆ ವಿಳಂಬ ಹಾಗೂ ತ್ವರಿತಗತಿಯ ವಿಚಾರಣೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಕಳೆದ ಅಕ್ಟೋಬರ್ ನಲ್ಲಿ ವಿಚಾರಣೆ ಅನ್ಡೆಸಿದ್ದ ನ್ಯಾಯಾಲಯ "ನ್ಯಾಯಾಲಯಕ್ಕೆ ಯಾವ ವಿಚಾರ ಎಷ್ಟು ಪ್ರಮುಖ ಎನ್ನುವುದು ತಿಳಿದಿದೆ" ಎಂದು ಹೇಳಿತ್ತು. ಅಲ್ಲದೆ ಅಯೋಧ್ಯೆ ವಿವಾದ ಸಂಬಂಧದ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಿ ಆದೇಶಿಸಿತ್ತು.
ಇದೀಗ ಜನವರಿ 4ರಿಂದ ವಿಚಾರಣೆ ಪ್ರಾರಂಬವಾಗಲಿದೆ ಎಂದು ಕೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿವಾದ ಸಂಬಂಧದ ವಿಚಾರಣೆ ಜನವರಿಗೆ ಮುಂದೂಡಲ್ಪಟ್ಟ ಬೆನ್ನಲ್ಲೇ ರಾಮಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ಕೇಂದ್ರದ ಮೇಲೆ ಒತ್ತಡಗಳು ಹೆಚ್ಚಾಗುತ್ತಾ ಬಂದಿದ್ದವು.ಬಿಜೆಪಿ, ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನು ಜಾರಿ ಮಾಡಲು ಸರ್ಕಾರವನ್ನು ಒತ್ತಾಯಿಸಿದ್ದವು./ಈ ವಿಚಾರ ಬಿಜೆಪಿ ಹಾಗೂ ಶಿವಸೇನೆ ನಡುವೆ ವಾಕ್ಸಮರಕ್ಕೆ ಸಹ ಕಾರಣವಾಗಿತ್ತು.
ಈ ನಡುವೆ ರಾಮ ಮಂದಿರ ನಿರ್ಮಾಣದ ದಿನಾಂಕವನ್ನು ಕೇಂದ್ರ ಸರ್ಕಾರ ಪ್ರಕಟಿಸಬೇಕು ಎಂದು ಅಯೋಧ್ಯೆಯಲ್ಲಿ ಇತ್ತೀಚೆಗೆ ನಡೆದಿದ್ದ ಧರ್ಮ ಸಂಸತ್ ಸಹ ನಿರ್ಣಯ ಕೈಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


