ದೇಶ

ವಿವಿಐಪಿ ಕ್ಯಾಪ್ಟರ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿ ವಿದೇಶ ಪ್ರವಾಸಕ್ಕೆ ಕೋರ್ಟ್ ಅಸ್ತು

ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿಗಳಾದ ವಾಯುಪಡೆ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷೆಲ್ ಎಸ್.ಪಿ.ತ್ಯಾಗಿ....

ವಿವಿಐಪಿ ಕ್ಯಾಪ್ಟರ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿ ವಿದೇಶ ಪ್ರವಾಸಕ್ಕೆ ಕೋರ್ಟ್ ಅಸ್ತು
ಎಸ್ ಪಿ ತ್ಯಾಗಿ
Published On :
ನವದೆಹಲಿ: ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿಗಳಾದ ವಾಯುಪಡೆ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷೆಲ್ ಎಸ್.ಪಿ.ತ್ಯಾಗಿ ಹಾಗೂ ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಅವರ ವಿದೇಶ ಪ್ರವಾಸಕ್ಕೆ ದೆಹಲಿ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
2019ರ ಮಾರ್ಚ್ ನಲ್ಲಿ ಅಮೆರಿಕಕ್ಕೆ ತೆರಳಲು ಅನುಮತಿ ಕೋರಿ ಎಸ್ ಪಿ ತ್ಯಾಗಿ ಹಾಗೂ ಸಂಜೀವ್ ತ್ಯಾಗಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿಗಳ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ.
ಕ್ಯಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೆಪ್ಟೆಂಬರ್ 1, 2017ರಲ್ಲಿ ಎಸ್ ಪಿ ತ್ಯಾಗಿ, ಬ್ರಿಟಿಷ್ ಪ್ರಜೆ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಹಾಗೂ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.
ತ್ಯಾಗಿ ಅವರು ಅಗಸ್ಟಾ ವೆಸ್ಟ್​ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ  ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್​ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ  ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.