ರಾಜಕೀಯ ಲಾಭಕ್ಕಾಗಿ ಶಬರಿಮಲೆಗೆ ಭೇಟಿ ನೀಡುವವರಿಗೆ ರಕ್ಷಣೆ ಇಲ್ಲ: ಪೊಲೀಸರು
ರಾಜಕೀಯ ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ಶಬರಿಮಲೆಗೆ ಭೇಟಿ ನೀಡುವ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ....

Published On :
ಶಬರಿಮಲೆ: ರಾಜಕೀಯ ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ಶಬರಿಮಲೆಗೆ ಭೇಟಿ ನೀಡುವ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಶಬರಿಮಲೆಯಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿಗಳು ಕೇರಳ ಪೊಲೀಸ್ ಮಹಾ ನಿರ್ದೇಶಕ ಲೋಕನಾಥ್ ಬೆಹೆರಾ ಅವರಿಗೆ ವರದಿ ಮಾಡಿದ್ದಾರೆ.
ಶಬರಿಮಲೆಗೆ ಭೇಟಿ ನೀಡುವ ಮಹಿಳೆಯರನ್ನು ಪ್ರತಿಭಟನಾಕಾರರಿಂದ ರಕ್ಷಿಸಲು ನಿಯೋಜಿಸಿರುವ ಪೊಲೀಸ್ ಅಧಿಕಾರಿಗಳು ತೀವ್ರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಬರಿಮಲೆಗೆ ಲಕ್ಷಾಂತರ ಭಕ್ತರು ಬರುತ್ತಿದ್ದಾರೆ. ಆದರೆ ಕೆಲವು ಯಾತ್ರಿಗಳು ಮುಂಚಿತವಾಗಿಯೇ ಸಾಮಾಜಿಕ ಮಾಧ್ಯಮದಲ್ಲಿ ಇಲ್ಲಿಗೆ ಬರುವ ಸಮಯ ಮತ್ತು ದಿನ ಘೋಷಿಸುವುದರಿಂದ ಅವರಿಗೆ ರಕ್ಷಣೆ ನೀಡುವುದು ಕಷ್ಟವಾಗುತ್ತಿದೆ ಎಂದು ಶಬರಿಮಲೆ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಕಾರ್ಯಕರ್ತರು, ಹೋರಾಟಗಾರರ ಅಯ್ಯಪ್ಪಸ್ವಾಮಿ ದೇವಸ್ಥಾನ ಭೇಟಿ ತಡೆಯಲು ಪೊಲೀಸರಿಗೆ ಅನುಮತಿ ನೀಡಬೇಕು ಎಂದು ವರದಿ ಸಲಹೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


