ಮುಂದಿನ 2 ವರ್ಷದಲ್ಲಿ 100 ಬಿಲಿಯನ್ ಡಾಲರ್ ಎಫ್ ಡಿಐಗೆ ಭಾರತದ ನಿರೀಕ್ಷೆ: ಸುರೇಶ್ ಪ್ರಭು
ಮುಂದಿನ ಎರಡು ವರ್ಷದಲ್ಲಿ 100 ಬಿಲಿಯನ್ ಅಮೆರಿಕನ್ ಡಾಲರ್ ವಿದೇಶಿ ನೇರ ಬಂಡವಾಳ ಹೂಡಿಕೆ ಸ್ವೀಕಾರ ಭಾರತದ ಗುರಿಯಾಗಿದೆ ಎಂದು ಕೇಂದ್ರ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.

ನವದೆಹಲಿ: ಮುಂದಿನ ಎರಡು ವರ್ಷದಲ್ಲಿ 100 ಬಿಲಿಯನ್ ಅಮೆರಿಕನ್ ಡಾಲರ್ ವಿದೇಶಿ ನೇರ ಬಂಡವಾಳ ಹೂಡಿಕೆ ಸ್ವೀಕಾರ ಹಾಗೂ ಜಪಾನ್, ದಕ್ಷಿಣ ಕೊರಿಯಾ, ಚೀನಾ ಮತ್ತು ರಷ್ಯಾದಂತಹ ರಾಷ್ಟ್ರಗಳ ಕಂಪನಿಗಳು ಹೂಡಿಕೆ ಮಾಡಿ ಕಾರ್ಯಾರಂಭಿಸಲು ವಿಶೇಷ ಕೈಗಾರಿಕಾ ಕ್ಲಸ್ಟರ್ ಸೃಷ್ಟಿಸುವುದು ಭಾರತದ ಪ್ರಮುಖ ಗುರಿಯಾಗಿದೆ ಎಂದು ಕೇಂದ್ರ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.
ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಹೂಡಿಕೆ ಮಾಡುವಂತಹ ದೇಶಗಳು ಹಾಗೂ ವಲಯಗಳನ್ನು ವಾಣಿಜ್ಯ ಮತ್ತು ಉಧ್ಯಮ ಸಚಿವಾಲಯದಿಂದ ಗುರುತಿಸಲಾಗುವುದು ಎಂದು ವಾಣಿಜ್ಯ ಮತ್ತು ಉದ್ಯಮ ಖಾತೆ ಸಚಿವರು ಆಗಿರುವ ಸುರೇಶ್ ಪ್ರಭು ತಿಳಿಸಿದ್ದಾರೆ.
ವಿವಿಧ ವಲಯಗಳಿಂದ 100 ಬಿಲಿಯನ್ ಎಫ್ ಡಿಎ ಭಾರತಕ್ಕೆ ಹರಿದುಬರಬೇಕೆಂಬ ಗುರಿ ಹೊಂದಲಾಗಿದೆ. ಆದರೆ, ಇದು ಒಂದು ವರ್ಷದಲ್ಲಿ ಸಾಧ್ಯವಾಗದ ಮಾತು. ಅಂತಹ ಕಂಪನಿಗಳು, ವಲಯಗಳು ಮತ್ತು ದೇಶಗಳನ್ನು ಗುರುತಿಸಲಾಗುತ್ತಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ರೋಡ್ ಶೋ ನಡೆಸಲಾಗುವುದು ಎಂದು ಸುದ್ದಿಸಂಸ್ಥೆಯೊಂದರ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.
ಮುಂದಿನ ವರ್ಷ ಸಾಗರೋತ್ತರ ಹೂಡಿಕೆದಾರರನ್ನು ಆಕರ್ಷಿಸಲು ಕೈಗಾರಿಕಾ ಕ್ಲಸ್ಟರ್ ಗಳನ್ನು ಸೃಷ್ಟಿಸಲಾಗುವುದು, ಭಾರತದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಚೀನಾ ಒಪ್ಪಿಕೊಂಡಿದ್ದು, ಭಾರತದಲ್ಲಿ ಕಾರ್ಖಾನೆ ಸ್ಥಾಪಿಸಲು ಉತ್ಸುಕವಾಗಿರುವ ಆದೇಶಗಳ ಕಂಪನಿಗಳ ಪಟ್ಟಿಯನ್ನು ನೀಡಿದೆ. ಇದೇ ರೀತಿಯಲ್ಲಿ ಯುರೋಪ್ ಮತ್ತು ಅಮೆರಿಕಾ ಮತ್ತಿತರ ರಾಷ್ಟ್ರಗಳ ಕಂಪನಿಗಳನ್ನೂ ಸ್ವಾಗತಿಸಲಾಗುವುದು. ಭಾರತದಲ್ಲಿ ಅವುಗಳಿಗೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


