ಅರುಣ್ ಜೇಟ್ಲಿ ಭೇಟಿ ಮಾಡಿದ ಕುಮಾರಸ್ವಾಮಿ: ಜಿಎಸ್ ಟಿ ಪರಿಹಾರ ಅವಧಿ ವಿಸ್ತರಣೆ ಕೋರಿದ ಸಿಎಂ
ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿ.27 ರಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ನೀಡಲಾಗುತ್ತಿರುವ ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ

Published On :
ನವದೆಹಲಿ: ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿ.27 ರಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ನೀಡಲಾಗುತ್ತಿರುವ ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ ವಿಸ್ತರಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ಜಿಎಸ್ ಟಿ ಜಾರಿಯ ನಂತರ ರಾಜ್ಯದ ಆದಾಯ ಕೊರತೆ ಶೇ.20 ರಷ್ಟು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಉಂಟಾಗುತ್ತಿರುವ ನಷ್ಟವನ್ನು ಭರಿಸಲು ಜಿಎಸ್ ಟಿ ಪರಿಹಾರ ಅವಧಿಯನ್ನು 2025 ವರೆಗೆ ವಿಸ್ತರಿಸಬೇಕೆಂದು ಅರುಣ್ ಜೇಟ್ಲಿಗೆ ಸಿಎಂ ಮನವಿ ಮಾಡಿದ್ದಾರೆ.
ಪ್ರಸ್ತುತ ಜಿಎಸ್ ಟಿ ಜಾರಿಯಾದ 5 ವರ್ಷಗಳ ವರೆಗೆ ರಾಜ್ಯಗಳಿಗೆ ಪರಿಹಾರ ನೀಡಲಾಗುತ್ತಿದ್ದು 2022 ವರೆಗೆ ಪರಿಹಾರ ಸಿಗಲಿದೆ. ರಾಜ್ಯಕ್ಕೆ ಜಿಎಸ್ ಟಿಯಿಂದ ಉಂಟಾಗಿರುವ ನಷ್ಟ 2022 ರ ನಂತರವೂ ಮುಂದುವರೆಯಲಿದ್ದು, ಹಲವು ಯೋಜನೆಗಳ ಜಾರಿಗೆ ಅಡ್ಡಿಯಾಗಲಿದೆ ಎಂದು ಜೇಟ್ಲಿ ಬಳಿ ಕುಮಾರಸ್ವಾಮಿ ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


