ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾಪಡೆ 4 ಉಗ್ರರನ್ನು ಹೊಡೆದುರುಳಿಸಿದೆ ಎಂದು ಶನಿವಾರ ತಿಳಿದುಬಂದಿದೆ...

Published On :
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾಪಡೆ 4 ಉಗ್ರರನ್ನು ಹೊಡೆದುರುಳಿಸಿದೆ ಎಂದು ಶನಿವಾರ ತಿಳಿದುಬಂದಿದೆ.
ಪುಲ್ವಾಮ ಜಿಲ್ಲೆಯ ರಾಜ್ಪೊರದಲ್ಲಿ ಉಗ್ರರು ದಾಳಿ ನಡೆಸಿದ್ದು, ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಉಗ್ರರಿಗೆ ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು 4 ಉಗ್ರರನ್ನು ಹತ್ಯೆ ಮಾಡಿದ್ದು, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಈ ನಡುವೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಸ್ಥಳದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


