ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು
ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತೆ ಏರಿಳಿತವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On :
ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತೆ ಏರಿಳಿತವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತುಮಕೂರಿನ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.
ಮಾಧ್ಯಮವೊಂದ ವರದಿ ಮಾಡಿರುವಂತೆ ಶ್ರೀಗಳಿಗೆ ಕಫ ಹೆಚ್ಚಾಗಿ ಉಸಿರಾಟದಲ್ಲಿ ಸ್ವಲ್ಪ ಏರುಪೇರಾಗಿದೆ. ಶ್ರೀಗಳು ಈಗ ಆಕ್ಸಿಜನ್ ಮೂಲಕ ಉಸಿರಾಡುತ್ತಿದ್ದಾರೆ. ವೈದ್ಯರು ಶ್ರೀಗಳಿಗೆ ಮೂಗಿನ ಮೂಲಕ ಗ್ಲೂಕೋಸ್ ನೀಡುತ್ತಿದ್ದು, ಸ್ವಾಮೀಜಿಗಳಿಗೆ ಹೈಯರ್ ಆಂಟಿಬಯೋಟಿಕ್ ಹಾಗೂ ಫಿಸಿಯೋ ತೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಗಂಗಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಶ್ರೀಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಮಠಕ್ಕೆ ಭೇಟಿ ನೀಡಿದ ಡಾ. ನಿರ್ಮಲಾನಂದನಾಥ ಶ್ರೀ
ಇನ್ನು ಇದ್ಕಕೂ ಮೊದಲು ತುಮಕೂರಿನ ಸಿದ್ದಗಂಗಾ ಮಠಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಶ್ರೀಗಳು ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿಗಳವರ ಆರೋಗ್ಯ ವಿಚಾರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


