ಜಲ್ಲಿಕಟ್ಟು ವಿವಾದ: ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್
ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆ ವಿವಾದವನ್ನು ಸಾಂವಿಧಾನಿಕ ಪೀಠಕ್ಕೆ ಸುಪ್ರೀಂರ್ಕೋಟ್ ವರ್ಗಾವಣೆ ಮಾಡಿದೆ.

ನವದೆಹಲಿ: ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಸಂಬಂಧಿಸಿದ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ಸುಪ್ರೀಂರ್ಕೋಟ್ ವರ್ಗಾಯಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ಆರ್ ಎಪ್ ನಾರಿಮನ್ ಅವರನ್ನೊಳಗೊಂಡ ಪೀಠ, ಐದು ಪ್ರಶ್ನೆಗೊಳೊಂದಿಗೆ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ಸಂವಿಧಾನ ಪೀಠಕ್ಕಾಗಿ ಐದು ಪ್ರಶ್ನೆಗಳನ್ನು ರಚಿಸಲಾಗಿದೆ ಎಂದು ಹಿರಿಯ ವಕೀಲ ನಾರಿಮನ್ ತಿಳಿಸಿದ್ದಾರೆ.
ಜಲಿಕಟ್ಟು ಕ್ರೀಡೆಗೆ ಸಂಬಂಧಿಸಿದಂತೆ ತಮಿಳುನಾಡು ಹಾಗೂ ಮಹಾರಾಷ್ಚ್ರ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಐವರು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನಪೀಠ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು.
ನೆಲದ ಕಾನೂನಿನ ಆಧಾರದ ಮೇಲೆ ಸಾಂಪ್ರದಾಯಿಕ ಕ್ರೀಡೆಗಳಾದ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡುವ ಕಾನೂನು ರೂಪಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಡಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಉನ್ನತ ಪೀಠ ನಿರ್ಧರಿಸಲಿದ್ದು, ಅಲ್ಲಿಯವರೆಗೂ ತೀರ್ಪನ್ನು ಕಾಯ್ದಿರಿಸಲಾಗಿದೆ .
ಪೊಂಗಲ್ ಹಬ್ಬದ ಅಂಗವಾಗಿ ಜಲ್ಲಿಕಟ್ಟು ಕ್ರೀಡೆಯನ್ನು ತಮಿಳುನಾಡಿನಲ್ಲಿ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗಿದೆ.ಇಂತಹ ಕ್ರೀಡೆಗಳಲ್ಲಿ ಪ್ರಾಣಿಗಳ ಬಳಕೆಯನ್ನು ಸುಪ್ರೀಂಕೋರ್ಟ್ ನಿರ್ಬಂಧಿಸಿತ್ತು. ಆದಾಗ್ಯೂ,
ತಮಿಳುನಾಡು, ಮಹಾರಾಷ್ಟ್ರ ಸರ್ಕಾರಗಳು ಜಲ್ಲಿಕಟ್ಟು ಕ್ರೀಡೆಗಳಿಗೆ ಅವಕಾಶ ಕಲ್ಪಿಸುವ ಪ್ರಾಣಿಗಳ ರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


