ದೇಶ

ತಮಿಳುನಾಡು ರಕ್ಷಣಾ ಕಾರಿಡಾರ್ ನಿಂದ ಚೆನ್ನೈ, ಬೆಂಗಳೂರು ಸಂಪರ್ಕ: ನಿರ್ಮಲಾ ಸೀತಾರಾಮನ್

2018-19ರ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ತಮಿಳುನಾಡು ರಕ್ಷಣಾ ಕಾರಿಡಾರ್ ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತಮಿಳುನಾಡು ರಕ್ಷಣಾ ಕಾರಿಡಾರ್ ನಿಂದ  ಚೆನ್ನೈ, ಬೆಂಗಳೂರು ಸಂಪರ್ಕ: ನಿರ್ಮಲಾ ಸೀತಾರಾಮನ್
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ (ಸಾಂದರ್ಭಿಕ ಚಿತ್ರ)
Published On :

ನವದೆಹಲಿ: 2018-19ರ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ತಮಿಳುನಾಡು ರಕ್ಷಣಾ ಕಾರಿಡಾರ್  ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್  ಹೇಳಿದ್ದಾರೆ.

ತಮಿಳುನಾಡಿನಲ್ಲಿ ಮೊದಲಿಗೆ  ಆರಂಭಗೊಳ್ಳುವ ಕಾರಿಡಾರ್ , ಚೆನ್ನೈ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದ್ದು, ಎರಡನೇ ಕಾರಿಡಾರನ್ನು ಶೀಘ್ರದಲ್ಲಿಯೇ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

 ಹಣಕಾಸು ಸಚಿವ ಅರುಣ್ ಜೇಟ್ಲಿ ನಿನ್ನೆ ಮಂಡಿಸಿದ್ದ ಬಜೆಟ್ ನಲ್ಲಿ  ಎರಡು ರಕ್ಷಣಾ ಕಾರಿಡಾರ್ ಸ್ಥಾಪನೆ ಮಾಡುವುದಾಗಿ ಹೇಳಿದ್ದರು. ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ರಕ್ಷಣಾ ಉತ್ಪನ್ನ ಉತ್ಪಾದನೆಯನ್ನು ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ದೇಶದಲ್ಲಿ ರಕ್ಷಣಾ ಉತ್ಪನ್ನ ಉತ್ಪಾದಿಸುವ ಉದ್ಯಮಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.

ಈ ಪ್ರಸ್ತಾವಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅರುಣ್ ಜೇಟ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಕಳೆದ ಬಾರಿಗೆ ಹೋಲಿಸಿದ್ದರೆ ಈ ಬಾರಿ ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಹಣದಲ್ಲಿ ಶೇ.7.9 ರಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.