ದೇಶ

ಕಸ್ಗಂಜ್ ಗಲಭೆ : ಮತ್ತೊಬ್ಬ ಶಂಕಿತನ ಬಂಧನ

ಗಣರಾಜ್ಯೋತ್ಸವ ದಿನದಂದು ಉತ್ತರ ಪ್ರದೇಶದ ಕಸ್ಗಂಜ್ ನಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತೊಬ್ಬ ಶಂಕಿತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಕಸ್ಗಂಜ್ ಗಲಭೆ : ಮತ್ತೊಬ್ಬ ಶಂಕಿತನ ಬಂಧನ
ಉತ್ತರ ಪ್ರದೇಶದ ಕಸ್ಗಂಜ್ ಗಲಭೆ ಸಂಬಂಧಿಸಿದ (ಸಾಂದರ್ಭಿಕ ಚಿತ್ರ)
Published On :

ಉತ್ತರ ಪ್ರದೇಶ: ಗಣರಾಜ್ಯೋತ್ಸವ  ದಿನದಂದು ಉತ್ತರ ಪ್ರದೇಶದ ಕಸ್ಗಂಜ್ ನಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತೊಬ್ಬ ಶಂಕಿತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಅಭಿಷೇಕ್ ಚಂದನ್ ಗುಪ್ತಾ ಹತ್ಯೆಗೆ ಸಂಬಂಧಿಸಿದಂತೆ ರಾಹತ್ ಖುರೇಷಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಕಸ್ಸಂಜ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ಶ್ರೀವಾಸ್ತವ್ ತಿಳಿಸಿದ್ದಾರೆ. ಘಟನೆ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಿರಾಂಗ ಯಾತ್ರೆ ಸಾಗುತ್ತಿದ್ದ ವೇಳೆ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶದಲ್ಲಿ ಗಲಭೆ ಸಂಭವಿಸಿ 23 ವರ್ಷದ ಚಂದನ್ ಗುಪ್ತಾ ಹತ್ಯೆಯಾಗಿತ್ತು. ಮೂರು ಅಂಗಡಿ, ಎರಡು ಬಸ್ಸು,  ಒಂದು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಲಾಗಿತ್ತು.

 ಈ ಪ್ರಕರಣ ಸಂಬಂಧ ಪೊಲೀಸರು 20 ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ 17 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.