ನಮ್ಮನ್ನು ಬಿಟ್ಟು ಕಾಂಗ್ರೆಸ್ ಏನೂ ಮಾಡಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ
ಕಾಂಗ್ರೆಸ್ ತಮನ್ನು ಬಿಟ್ಟು ದೆಹಲಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ: ನಮನ್ನು ಬಿಟ್ಟು ಕಾಂಗ್ರೆಸ್ ದೆಹಲಿಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು, ಸಿಪಿಐಎಂ ಜೊತೆಗೆ ಕಾಂಗ್ರೆಸ್ ತಮ್ಮ ಸರ್ಕಾರವನ್ನು ಟೀಕಿಸುವಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಮತ್ತು ಸಿಪಿಐ (ಎಂ) ಎರಡೂ ಒಂದೇ. ಇದು ಹೊಸ ವಿಚಾರವೇನಲ್ಲಾ. ಸಿಪಿಐ( ಎಂ) ಹೇಗೆ ಕಾಂಗ್ರೆಸ್ ಗೆ ಸಹಕಾರ ಕೊಡುತ್ತದೆ ಎಂಬುದನ್ನು ನಾನು ಬಲ್ಲೆ ಎಂದು ರಾಜ್ಯಪಾಲರ ಮೇಲಿನ ಭಾಷಣದ ವಂದನಾನಿರ್ಣಯದಲ್ಲಿ ಮಮತಾ ಬ್ಯಾನರ್ಜಿ ಹೇಳಿದರು.
ತೃಣಮೂಲ ಕಾಂಗ್ರೆಸ್ ದೂರ ಇಟ್ಟು ದೆಹಲಿ ಕಾಂಗ್ರೆಸ್ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ರಾಜಸ್ತಾನದಲ್ಲಿ ಕಾಂಗ್ರೆಸ್ ಜಯಗಳಿಸಿರುವುದಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಪಶ್ಟಿಮ ಬಂಗಾಳ ರಾಜ್ಯದ ಅಧಿವೇಶನ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಮಾತನಾಡಬೇಕಿದ್ದರೆ, ಸಿಪಿಐ(ಎಂ) ಸದಸ್ಯರೊಂದಿಗೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದರು.
ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ಪ್ರತಿಪಕ್ಷದವರು ರಚನಾತ್ಮಕ ವಿಮರ್ಶೆ ಮಾಡಲಿ.ಎಲ್ಲಾ ರಾಜ್ಯಗಳಂತೆ ಪಶ್ಚಿಮ ಬಂಗಾಳ ಸರ್ಕಾರವೂ ಅಭಿವೃದ್ದಿಯೋಜನೆಗಳಿಗಾಗಿ ಶೇಕಡಾ 45 ರಷ್ಟು ಸಾಲ ಪಡೆದಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


