ಮಧುರೈ ಮೀನಾಕ್ಷಿ ದೇಗುಲದಲ್ಲಿ ಅಗ್ನಿ ಅವಘಡ, ಆಗ್ನಿಶಾಮಕ ದಳ ದೌಡು!
ತಮಿಳುನಾಡಿನ ಇತಿಹಾಸ ಪ್ರಸಿದ್ಧ ದೇಗುಲ ಮೀನಾಕ್ಷಿ ದೇಗುಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆಗ್ನಿಶಾಮಕ ದಳದ ಸಿಬ್ಬಂದಿಗಳು ದೇಗುಲಕ್ಕೆ ದೌಡಾಯಿಸಿದ್ದಾರೆ.

Published On :
ಮಧುರೈ: ತಮಿಳುನಾಡಿನ ಇತಿಹಾಸ ಪ್ರಸಿದ್ಧ ದೇಗುಲ ಮೀನಾಕ್ಷಿ ದೇಗುಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆಗ್ನಿಶಾಮಕ ದಳದ ಸಿಬ್ಬಂದಿಗಳು ದೇಗುಲಕ್ಕೆ ದೌಡಾಯಿಸಿದ್ದಾರೆ.
ದೇಗುಲದ ಆವರಣದಲ್ಲಿ ಸುಮಾರು ಐದಾರು ಆಂಗಡಿಗಳಿಗೆ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕದಳದ ಒಟ್ಟು 5 ವಾಹನಗಳು ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ವರೆಗೂ ಅಗ್ನಿ ಅವಘಡದಲ್ಲಿ ಸಾವು-ನೋವುಗಳಾದ ಕುರಿತು ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಮಧುರೈ ಜಿಲ್ಲಾಧಿಕಾರಿ ದೌಡಾಯಿಸಿದ್ದು, ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಮೇಲ್ನೋಟಕ್ಕೆ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದು, ಕಾರ್ಯಾಚರಣೆ ಬಳಿಕ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


