ರೈಲಿನಲ್ಲಿ ಲೈಂಗಿಕ ಕಿರುಕುಳ: ನಟಿ ಸನುಶಾ 'ಅಸಾಧಾರಣ ಧೈರ್ಯ'ಕ್ಕೆ ಕೇರಳ ಪೊಲೀಸರ ಗೌರವ
ಚಲಿಸುವ ರೈಲಿನಲ್ಲಿ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದ ಮಲಯಾಳಂ ನಟಿ ಸನುಶಾರನ್ನು ಕೇರಳ ಪೊಲೀಸರು ಗೌರವಿಸಿದ್ದಾರೆ...

Published On :
ತಿರುವನಂತಪುರಂ: ಚಲಿಸುವ ರೈಲಿನಲ್ಲಿ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದ ಮಲಯಾಳಂ ನಟಿ ಸನುಶಾರನ್ನು ಕೇರಳ ಪೊಲೀಸರು ಗೌರವಿಸಿದ್ದಾರೆ.
ಕೇರಳ ಡಿಜಿಪಿ ಲೋಕನಾಥ್ ಬೆಹೆರಾ ಅವರು ತ್ರಿವೆಂಡ್ರಮ್ ನಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಟಿಗೆ ಗೌರವಿಸಿದರು ಜತೆಗೆ ಆಕೆಯದ್ದು ಅನುಕರಣೀಯ ಧೈರ್ಯ ಎಂದು ಶ್ಲಾಘಿಸಿದರು.
ಬುಧವಾರ ಮಧ್ಯರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಮಂಗಳೂರು-ತಿರುವನಂತಪುರಂ ಮಾವೆಲಿ ಎಕ್ಸ್ ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಈ ಘಟನೆ ಸಂಭವಿಸಿತ್ತು. ರೈಲು ವಲ್ಲತೊಲ್ ನಗರ ನಿಲ್ದಾಣಕ್ಕೆ ಸಾಗುತ್ತಿತ್ತು. ಈ ಸಂದರ್ಭದಲ್ಲಿ 40 ವರ್ಷದ ವ್ಯಕ್ತಿಯೋರ್ವ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ.
ಈ ಸಂಬಂಧ ಆರೋಪಿ ತಮಿಳುನಾಡಿನ ಮೂಲತ ಆಂಟೋ ಬೋಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ತ್ರಿಶೂರ್ ರೈಲ್ವೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.
ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ ಸನುಶಾ 2004ರಲ್ಲಿ ಮಮ್ಮುಟ್ಟಿ ಅಭಿನಯದ ಕಚ್ಚಾ ಚಿತ್ರದಲ್ಲಿ ಅತ್ಯುತ್ತಮ ಬಾಲನಟಿ ರಾಜ್ಯ ಪ್ರಶಸ್ತಿಯನ್ನು ಗಳಿಸಿದ್ದರು. ದಕ್ಷಿಣ ಭಾರತ ಚಿತ್ರರಂಗದಲ್ಲಿ ಬೇಡಿಕೆಯಲ್ಲಿರುವ ನಟಿ ಸನುಶಾ ಇದುವರೆಗೆ 40ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಮತ್ತು ಅನೇಕ ಟಿವಿ ಧಾರವಾಹಿಗಳಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


