ಕಾಶ್ಮೀರವನ್ನು ಉಳಿಸುವುದಕ್ಕಾಗಿ ನರಕಕ್ಕೆ ಹೋಗುವುದಕ್ಕೂ ಸಿದ್ಧ: ಮೆಹಬೂಬಾ ಮುಫ್ತಿ
ಪಿಡಿಪಿ-ಬಿಜೆಪಿ ಮೈತ್ರಿಯನ್ನು ದುಷ್ಟಶಕ್ತಿಯೊಂದಿಗಿನ ಒಪ್ಪಂದ (ಡೀಲ್ ವಿತ್ ಡೆವಿಲ್) ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದು,

Published On :
ಪಿಡಿಪಿ-ಬಿಜೆಪಿ ಮೈತ್ರಿಯನ್ನು ದುಷ್ಟಶಕ್ತಿಯೊಂದಿಗಿನ ಒಪ್ಪಂದ (ಡೀಲ್ ವಿತ್ ಡೆವಿಲ್) ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದು, ಪ್ರತಿಪಕ್ಷ ನಾಯಕನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಕಾಶ್ಮೀರವನ್ನು ಉಳಿಸುವುದಕ್ಕಾಗಿ ನಾನು ನರಕಕ್ಕೆ ಹೋಗುವುದನ್ನು ಒಪ್ಪಿಕೊಳ್ಳುವುದಕ್ಕೂ ಸಿದ್ಧ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದ ಓಮರ್ ಅಬ್ದುಲ್ಲಾ, ಬಿಜೆಪಿ ಹಾಗೂ ಪಿಡಿಪಿ ನಡುವಿನ ಒಪ್ಪಂದ ನನಗೆ ಡೀಲ್ ವಿತ್ ಡೆವಿಲ್ ನಂತೆ ಕಾಣಿಸುತ್ತಿದೆ. ಕಾಶ್ಮೀರದಲ್ಲಿ ಅದೇ ಮಾದರಿಯ ಪರಿಸ್ಥಿತಿ ಉಂಟಾಗಿದೆ ಎಂದು ಓಮರ್ ಅಬ್ದುಲ್ಲಾ ಹೇಳಿದ್ದರು.
ಇದೇ ವೇಳೆ ಭದ್ರತಾ ಸಿಬ್ಬಂದಿಗಳು 3 ಜನರನ್ನು ಹತ್ಯೆ ಮಾಡಿರುವುದರ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕೆಂದು ಓಮರ್ ಅಬ್ದುಲ್ಲಾ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿ ಕಾಶ್ಮೀರವನ್ನು ಉಳಿಸುವುದಕ್ಕಾಗಿ ನರಕಕ್ಕೆ ಹೋಗುವುದಕ್ಕೂ ಸಿದ್ಧ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


