ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಉತ್ತಮ ವೈದ್ಯರು ಆದರೆ, ಮೋದಿ ಸರ್ಕಾರ ಭಯಾನಕ ರೋಗಿ: ಚಿದಂಬರಂ
ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಪಿ ಚಿದಂಬರಂ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅತ್ಯುತ್ತಮ ವೈದ್ಯರು...

Published On :
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಪಿ ಚಿದಂಬರಂ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅತ್ಯುತ್ತಮ ವೈದ್ಯರು, ಆದರೆ ಮೋದಿ ಸರ್ಕಾರ ಭಯಾನಕ ರೋಗಿ ಎಂದು ಲೇವಡಿ ಮಾಡಿದ್ದಾರೆ.
ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿದೆ ಎಂದು ಸರ್ಕಾರ ಹೇಳಿಕೊಳ್ಳುತ್ತದೆ, ಆದರೆ ಮೋದಿ ಸರ್ಕಾರ ತನ್ನ ಸಮಸ್ಯೆಯನ್ನು ತಾನೆ ನಿರ್ಣಯ ಮಾಡಿಕೊಳ್ಳುತ್ತದೆ.
ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ್ ಸುಬ್ರಹ್ಮಣಿಯನ್ ಅವರು ಅತ್ಯುತ್ತಮ ವೈದ್ಯರು ಆದರೆ ಎನ್ ಡಿಎ ಸರ್ಕಾರವೇ ಭಯಾನಕ ರೋಗಿಯಾಗಿದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಆರ್ಥಿಕ ಪರಿಸ್ಥಿತಿಯ ವಾಸ್ತವತೆಯನ್ನು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ. ಕೃಷಿ ಸಮಸ್ಯೆಯನ್ನು ನಿರಾಕರಿಸುತ್ತದೆ, ಉದ್ಯೋಗ ಸಮಸ್ಯೆಯನ್ನು ಒಪ್ಪಿಕೊಳ್ಳುವುದಿಲ್ಲ, ಪ್ರತಿಪಕ್ಷಗಳ ವಾದವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಓರ್ವ ಭಯಾನಕ ರೋಗಿ ಔಷಧ ತೆಗೆದುಕೊಳ್ಳದೇ ತನ್ನದೇ ನಿರ್ಣಯಗಳನ್ನು ತಾನೇ ತೆಗೆದುಕೊಳ್ಳುತ್ತಾನೆ, ಅಂತೆಯೇ ಅರವಿಂದ್ ಸುಬ್ರಹ್ಮಣಿಯನ್ ಅವರು ಅತ್ಯುತ್ತಮ ವೈದ್ಯರಾದರೂ ಮೋದಿ ಸರ್ಕಾರ ಭಯಾನಕ ರೋಗಿ ಇದ್ದಂತೆ ಎಂದು ಚಿದಂಬರಂ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


