ದೇಶ

ಉಪ ಚುನಾವಣೆ ಸೋಲು: ರಾಜಸ್ಥಾನ ಸಿಎಂ ರಾಜೆ ಬದಲಾವಣೆಗೆ ಒತ್ತಾಯಿಸಿ ಅಮಿತ್ ಶಾಗೆ ಪತ್ರ

ಇತ್ತೀಚಿಗೆ ನಡೆದ ಒಂದು ವಿಧಾನಸಭೆ ಮತ್ತು ಎರಡು ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ನಂತರ ರಾಜಸ್ಥಾನ....

ಉಪ ಚುನಾವಣೆ ಸೋಲು: ರಾಜಸ್ಥಾನ ಸಿಎಂ ರಾಜೆ ಬದಲಾವಣೆಗೆ ಒತ್ತಾಯಿಸಿ ಅಮಿತ್ ಶಾಗೆ ಪತ್ರ
ವಸುಂಧರಾ ರಾಜೆ
Published On :
ಜೈಪುರ: ಇತ್ತೀಚಿಗೆ ನಡೆದ ಒಂದು ವಿಧಾನಸಭೆ ಮತ್ತು ಎರಡು ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ನಂತರ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಿದ್ದು, ಕೋಟಾ ಜಿಲ್ಲಾ ಬಿಜೆಪಿ ಘಟಕವೊಂದು ರಾಜೆ ರಾಜಿನಾಮೆ ಪಡೆಯಿರಿ ಎಂದು ಒತ್ತಾಯಿಸಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ.
ಕೋಟಾ ಬಿಜೆಪಿ ಒಬಿಸಿ ಘಟಕದ ಜಿಲ್ಲಾಧ್ಯಕ್ಷರು ರಾಜೆ ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಆದರೆ ಪಕ್ಷದ ಜಿಲ್ಲಾಧ್ಯಕ್ಷರು ಮಾತ್ರ ಮುಖ್ಯಮಂತ್ರಿಗೆ ಬೆಂಬಲ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಫೆಬ್ರವರಿ 1ರಂದು ಪ್ರಕಟವಾದ ಉಪ ಚುನಾವಣೆಯ ಫಲಿತಾಂಶದಿಂದಾಗಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಫಲಿತಾಂಶ ಪಕ್ಷದ ಪರವಾಗಿ ಬಂದಿಲ್ಲ ಎಂಬುದು ನನ್ನಂತಹ ಕಾರ್ಯಕರ್ತರಿಗೆ ಗೊತ್ತಿದೆ. ವಸುಂಧರಾ ರಾಜೆ ಕಾರ್ಯವೈಖರಿ ರಾಜ್ಯದ ಜನತೆಗೆ ತೃಪ್ತಿ ತಂದಿಲ್ಲ ಮತ್ತು ಇದರಿಂದ ಪಕ್ಷದ ಕಾರ್ಯಕರ್ತರ ನೈತಿಕತೆ ಕುಗ್ಗುತ್ತಿದೆ ಎಂದು ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಅಶೋಕ್ ಚೌಧರಿ ಅವರು ಅಮಿತ್ ಶಾಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.
ಈ ವರ್ಷಾಂತ್ಯಕ್ಕೆ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಹೊಸ್ತಿಲಲ್ಲೇ ನಡೆದ ಉಪ ಚುನಾವಣೆಯ ಸೋಲು ಸಿಎಂ ರಾಜೆ ನಿದ್ದೆಗೇಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.