ಜೇಟ್ಲಿ ಮಾನಹಾನಿ ಪ್ರಕರಣ: ಕೇಜ್ರಿವಾಲ್ ಡಿಡಿಸಿಎ ಸಭೆಯ ವಿವರ ಪಡೆಯಲು ಅನುಮತಿ ನಿರಾಕರಿಸಿದ ಹೈಕೋರ್ಟ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ....

Published On :
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ವಿರುದ್ಧ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ನ ಎರಡು ದಾಖಲೆಗಳನ್ನು ಪಡೆಯಲು ದೆಹಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ. ಆದರೆ ಡಿಡಿಸಿಎ ಸಭೆಯ ವಿವರ ಪಡೆಯಲು ಅನುಮಿತಿ ನೀಡಲು ನಿರಾಕರಿಸಿದೆ.
ಫೆಬ್ರವರಿ 10, 2003 ಮತ್ತು ಏಪ್ರಿಲ್ 6, 2003ಕ್ಕೆ ಸಂಬಂಧಿಸಿದ ಎರಡು ದಾಖಲೆಳನ್ನು ಪಡೆಯಲು ಹಾಗೂ ಡಿಡಿಸಿಎ ಸಭೆಯ ವಿವರ ಪಡೆಯಲು ಅನುಮತಿ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನಮೋಹನ್ ಅವರು, ಎರಡು ದಾಖಲೆಗಳನ್ನು ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಫೆಬ್ರವರಿ 12ರೊಳಗೆ ಅವುಗಳ ಪರಿಶೀಲನೆ ಮುಗಿಸುವಂತೆ ದೆಹಲಿ ಸಿಎಂ ಹೈಕೋರ್ಟ್ ಗಡುವು ನೀಡಿದೆ.
ಈ ಮಧ್ಯೆ, ಅರುಣ್ ಜೇಟ್ಲಿ ಅವರು ಡಿಡಿಸಿಎ ಅಧ್ಯಕ್ಷರಾಗಿದ್ದ 1999ರಿಂದ 2013ರ ನಡುವೆ ನಡೆದ ಡಿಡಿಸಿಎ ಸಭೆಯ ವಿವರ ಪಡೆಯಲು ಕೇಜ್ರಿವಾಲ್ ಮಾಡಿದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಆದರೆ ಈ ಸಭೆಯ ವಿವರ ಕೇಜ್ರಿವಾಲ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಹೇಗೆ ಪ್ರಸ್ತೂತವಾಗುತ್ತವೆ ಎಂಬುದು ತನಗೆ ಅರ್ಥವಾಗುತ್ತಿಲ್ಲ ಎಂದು ಕೋರ್ಟ್ ಹೇಳಿದೆ.
ಅರುಣ್ ಜೇಟ್ಲಿ ಅವರು ಡಿಡಿಸಿಎ ಅಧ್ಯಕ್ಷರಾಗಿದ್ದ ವೇಳೆ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ಹಣದ ವಹಿವಾಟು ನಡೆಸಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಆರು ಆಪ್ ನಾಯಕರು ಆರೋಪಿಸಿದ್ದರು. ಈ ಸಂಬಂಧ ಜೇಟ್ಲಿ ಅವರು ಆರು ಆಪ್ ನಾಯಕರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿಅರವಿಂದ್ ಕೇಜ್ರಿವಾಲ್Arvind KejriwalDefamation Caseಮಾನಹಾನಿ ಪ್ರಕರಣDDCA minutesಡಿಡಿಸಿಎ ಸಭೆ ವಿವರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


