ಪಾಕಿಸ್ತಾನಕ್ಕೆ ಸಿಪಿಇಸಿ ಮೇಲೆ ಭಾರತ ದಾಳಿಯ ಭಯ!
ಚೀನಾ-ಪಾಕಿಸ್ತಾನದ ಮಹತ್ವಾಕಾಂಕ್ಷಿ ಯೋಜನೆಯಾದ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯ ಸ್ಥಾಪನೆಗಳ ಮೇಲೆ ಭಾರತ ದಾಳಿ ಮಾಡಬಹುದೆಂದು ಪಾಕಿಸ್ತಾನಕ್ಕೆ ಭಯ ಉಂಟಾಗಲು

Published On :
ಇಸ್ಲಾಮಾಬಾದ್: ಚೀನಾ-ಪಾಕಿಸ್ತಾನದ ಮಹತ್ವಾಕಾಂಕ್ಷಿ ಯೋಜನೆಯಾದ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯ ಸ್ಥಾಪನೆಗಳ ಮೇಲೆ ಭಾರತ ದಾಳಿ ಮಾಡಬಹುದೆಂದು ಪಾಕಿಸ್ತಾನಕ್ಕೆ ಭಯ ಉಂಟಾಗಲು ಪ್ರಾರಂಭವಾಗಿದೆ ಎಂದು ಅಲ್ಲಿನ ಪತ್ರಿಕೆ ಡಾನ್ ಬರೆದಿದೆ.
ಭಾರತದಿಂದ ದಾಳಿ ನಡೆಯಬಹುದಾದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಪಿಇಸಿ ಯೋಜನೆಗಳಿರುವ ಪ್ರದೇಶಗಳಲ್ಲಿ ಪಾಕಿಸ್ತಾನ ಭದ್ರತೆಯನ್ನು ಹೆಚ್ಚಿಸಿದೆ ಎಂದು ಡಾನ್ ಪತ್ರಿಕೆ ವರದಿ ಪ್ರಕಟಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಹೇಳಿಕೆಯನ್ನೂ ಉಲ್ಲೇಖಿಸಿದೆ.
"ಭಾರತ ಈಗಾಗಲೇ 400 ಮುಸ್ಲಿಂ ಯುವಕರ ತಂಡವನ್ನು ಅಫ್ಘಾನಿಸ್ತಾನಕ್ಕೆ ಕಳಿಸಿ ತರಬೇತಿ ಕೊಡಿಸುತ್ತಿದ್ದು ಈ ಯುವಕರು ಸಿಪಿಇಸಿ ಸ್ಥಾಪನೆಗಳ ಮೇಲೆ ದಾಳಿ ನಡೆಸಲಿದ್ದಾರೆ, ಭಾರತದ ಟಾರ್ಗೆಟ್ ನಲ್ಲಿ ಕರಕೋರಮ್ ಹೆದ್ದಾರಿಯೂ ಸೇರಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


