ದೇಶ

ಲಖನೌ: ಗುಂಡು ಹಾರಿಸಿ ಗೂಂಡಾಗಳಿಂದ ಪತಿಯನ್ನು ರಕ್ಷಿಸಿದ ಮಹಿಳೆ, ಘಟನೆ ಸಿಸಿಟಿವಿಯಲ್ಲಿ ದಾಖಲು

ಮಹಿಳೆಯೊಬ್ಬರು ತನ್ನ ಪತಿಯನ್ನು ಗೂಂಡಾಗಳಿಂದ ರಕ್ಷಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖನೌ: ಗುಂಡು ಹಾರಿಸಿ ಗೂಂಡಾಗಳಿಂದ ಪತಿಯನ್ನು ರಕ್ಷಿಸಿದ ಮಹಿಳೆ, ಘಟನೆ ಸಿಸಿಟಿವಿಯಲ್ಲಿ ದಾಖಲು
ಲಖನೌ: ಗೂಂಡಾಗಳಿಂದ ಪತಿಯನ್ನು ರಕ್ಷಿಸಿದ ಧೀರ ಮಹಿಳೆ, ಘಟನೆ ಸಿಸಿಟಿವಿಯಲ್ಲಿ ದಾಖಲು
Published On :
ಲಖನೌ: ಮಹಿಳೆಯೊಬ್ಬರು ತನ್ನ ಪತಿಯನ್ನು  ಗೂಂಡಾಗಳಿಂದ ರಕ್ಷಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 
ಕೊಕ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡಹಗಲೇ ಗೂಂಡಾಗಳು ಅಬಿದ್ ಅಲಿ ಎಂಬ ವ್ಯಕ್ತಿಯನ್ನು ಥಳಿಸಿದ್ದಾರೆ. ಮನೆಯಿಂದ ಹೊರಗೆಳೆದು ತಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಆದರೆ ಅಬಿದ್ ಅಲಿ ಪತ್ನಿ ರಕ್ಷಣೆಗೆ ಧಾವಿಸಿದ್ದು, ಗೂಂಡಾಗಳ ಮೇಲೆ ಗುಂಡು ಹಾರಿಸಿ ಪತಿಯನ್ನು ರಕ್ಷಣೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.ಸಂತ್ರಸ್ತ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಅಬಿದ್ ಪತ್ನಿ ಗುಂಡು ಹಾರಿಸುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾಗಿರುವ ಗೂಂಡಾಗಳು ಪರಾರಿಯಾಗುವುದಕ್ಕೂ ಮುನ್ನ ದಂಪತಿಗಳಿಗೆ ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.