ದೇಶ

ಮಹಾತ್ಮ ಗಾಂಧಿ ಕಂಡ ಕನಸನ್ನು ಮೋದಿ ಮೂರುವರೆ ವರ್ಷಗಳಲ್ಲಿ ನನಸು ಮಾಡಿದ್ದಾರೆ: ಬಿಜೆಪಿ ಸಂಸದ

ಮಹಾತ್ಮ ಗಾಂಧಿ ಅವರ ಸ್ವಚ್ಛ ಭಾರತ ಕನಸನ್ನು ನರೇಂದ್ರ ಮೋದಿ ಸರ್ಕಾರ ಕೇವಲ ಮೂರುವರೆ ವರ್ಷಗಳಲ್ಲಿ ನನಸು ಮಾಡಿದೆ ಎಂದು ಬಿಜೆಪಿ....

ಮಹಾತ್ಮ ಗಾಂಧಿ ಕಂಡ ಕನಸನ್ನು ಮೋದಿ ಮೂರುವರೆ ವರ್ಷಗಳಲ್ಲಿ ನನಸು ಮಾಡಿದ್ದಾರೆ: ಬಿಜೆಪಿ ಸಂಸದ
ನರೇಂದ್ರ ಮೋದಿ
Published On :
ನವದೆಹಲಿ: ಮಹಾತ್ಮ ಗಾಂಧಿ ಅವರ ಸ್ವಚ್ಛ ಭಾರತ ಕನಸನ್ನು ನರೇಂದ್ರ ಮೋದಿ ಸರ್ಕಾರ ಕೇವಲ ಮೂರುವರೆ ವರ್ಷಗಳಲ್ಲಿ ನನಸು ಮಾಡಿದೆ ಎಂದು ಬಿಜೆಪಿ ಸಂಸದರೊಬ್ಬರು ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
ಇಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದಾನ ನಿರ್ಣಯದ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಸಂಸದ ರಾಕೇಶ್ ಸಿಂಗ್ ಅವರು, ಕಾಂಗ್ರೆಸ್ ಸರ್ಕಾರ ಆರು ದಶಕಗಳಲ್ಲಿ ಮಾಡದಿರುವುದನ್ನು ನರೇಂದ್ರ ಮೋದಿ ಅವರು ಕೇವಲ ಮೂರುವರೆ ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ ಎಂದರು.
ಕಾಂಗ್ರೆಸ್ ಸುಮಾರು 6 ದಶಕಗಳ ಕಾಲ ದೇಶವನ್ನು ಆಳಿದೆ. ಆದರೂ ಮಹಾತ್ಮ ಗಾಂಧಿ ಅವರ ಸ್ವಚ್ಛ ಭಾರತ ಕನಸು ಕನಸಾಗಿಯೇ ಉಳಿದಿತ್ತು. ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇವಲ ಮೂರುವರೆ ವರ್ಷಗಳಲ್ಲಿ ಗಾಂಧಿ ಕನಸು ನನಸಾಗಿದೆ ಎಂದು ರಾಕೇಶ್ ಸಿಂಗ್ ಹೇಳಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಸ್ವಚ್ಛ ಭಾರತ್ ಯೋಜನೆ ಅಡಿ ಕೇಂದ್ರ ಸರ್ಕಾರ 5.5 ಕೋಟಿ ಶೌಚಾಲಯಗಳನ್ನು ನಿರ್ಮಿಸಿದೆ. ನಮ್ಮ ಸರ್ಕಾರದಲ್ಲಿ ಸಮಾಜದ ಪ್ರತಿ ವರ್ಗದವರು, ಪ್ರತಿ ಧರ್ಮಕ್ಕೂ ಸಮಾನತೆ ನೀಡಲಾಗಿದೆ ಎಂದು ಬಿಜೆಪಿ ಸಂಸದ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.