ಏರ್‌ಸೆಲ್–ಮ್ಯಾಕ್ಸಿಸ್ ಹಗರಣ: ಕರಡು ತನಿಖಾ ವರದಿ ಚಿದಂಬರಂ ಮನೆ ತಲುಪಿದ್ದು ಹೇಗೆ? ಸಿಬಿಐನಿಂದ ತನಿಖೆ
ಏರ್‌ಸೆಲ್ –ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಿದ್ಧಪಡಿಸಿದ್ದ ತನಿಖಾ ವರದಿಯ ಕರಡು ಪ್ರತಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ....

Published On :
ನವದೆಹಲಿ: ಏರ್‌ಸೆಲ್ –ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಿದ್ಧಪಡಿಸಿದ್ದ ತನಿಖಾ ವರದಿಯ ಕರಡು ಪ್ರತಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಮನೆ ತಲುಪಿದ್ದು ಹೇಗೆ ಎಂಬುದರ ಕುರಿತು ಸಿಬಿಐ ಆಂತರಿಕೆ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿದಂಬರಂ ಮನೆ ಮೇಲೆ ದಾಳಿ ನಡೆಸಿದ್ದ ವೇಳೆ 2013ರಲ್ಲಿ ಸಿಬಿಐ ಸಿದ್ಧಪಿಡಿಸಿದ್ದ ತನಿಖಾ ವರದಿಯ ಕರಡು ಪ್ರತಿಯನ್ನು ಜಪ್ತಿ ಮಾಡಿತ್ತು.
ಏರ್‌ಸೆಲ್ –ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇಡಿ) ಕಳೆದ ಜನವರಿ 13ರಂದು ದೆಹಲಿಯ ಜೋರ್ ಬಾಗ್ ನಲ್ಲಿರುವ ಚಿದಂಬರಂ ಅವರ ನಿವಾಸದ ಮೇಲೆ ದಾಳಿ ಮಾಡಿತ್ತು. ಈ ವೇಳೆ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.
ಜನವರಿ 13ರಂದು ಇಡಿ ಅಧಿಕಾರಿಗಳು ದೆಹಲಿಯಲ್ಲಿರುವ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ನಿವಾಸ ಮತ್ಕು ಕಚೇರಿ ಮೇಲೆ ದಾಳಿ ನಡೆಸಿತ್ತು. ಅಲ್ಲದೆ ಕಾರ್ತಿ ಚಿದಂಬರಂ ಅವರ ಚೆನ್ನೈಯಲ್ಲಿರುವ ಆಪ್ತ ಸಹಾಯಕ ಮತ್ತು ಲೆಕ್ಕ ಪರಿಶೋಧಕರ ಮನೆಗಳಲ್ಲೂ ಶೋಧ ನಡೆಸಿದ್ದರು.
ಚಿದಂಬರಂ ಅವರ ನಿವಾಸದಲ್ಲಿ ಪತ್ತೆಯಾದ ಕರಡು ಪ್ರತಿ ಬಗ್ಗೆ ಇಡಿ ಅಧಿಕಾರಿಗಳು ಸಿಬಿಐಗೆ ಮಾಹಿತಿ ನೀಡಿದ್ದು, ತನಿಖಾ ವರದಿ ಸೋರಿಕೆಯಾಗಿದ್ದು ಹೇಗೆ ಎಂಬುದುರ ಕುರಿತು ಈಗ ಸಿಬಿಐ ಆಂತರಿಕ ತನಿಖೆ ನಡೆಸುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಇನ್ನು ಈ ಬಗ್ಗೆ ಯಾವುದೇ ಹೇಳಿಕೆ ನೀಡಲು ಪಿ.ಚಿದಂಬರಂ ಅವರು ನಿರಾಕರಿಸಿದ್ದು, ಈ ಹಿಂದೆ ಇಡಿ ದಾಳಿ ನಡೆಸಿದಾಗ, ಅಧಿಕಾರಿಗಳಿಗೆ ಮನೆಯಲ್ಲಿ ಏನೂ ಸಿಗದ ಕಾರಣ ಮುಜುಗರಗೊಂಡು ಕ್ಷಮೆಯಾಚಿಸಿ ತೆರಳಿದ್ದಾರೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


