ಚಾಲನಾ ಪರವಾನಗಿಗೂ ಆಧಾರ್ ಜೋಡಣೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರದ ಮಾಹಿತಿ
ಬ್ಯಾಂಕ್ ಖಾತೆ, ಪ್ಯಾನ್ ಕಾರ್ಡ್ ಗಳಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯದ ಬೆನ್ನಲ್ಲೇ ಇದೀಕ ಕೇಂದ್ರ ಸರ್ಕಾರ ಚಾಲನಾ ಪರವಾನಗಿಗಳಿಗೂ ಆಧಾರ್ ಜೋಡಣೆ ಕಡ್ಡಾಯ ಮಾಡುವ ಕುರಿತು ನಿರ್ಧಾರ ಕೈಗೊಂಡಿದೆ.

Published On :
ನವದೆಹಲಿ: ಬ್ಯಾಂಕ್ ಖಾತೆ, ಪ್ಯಾನ್ ಕಾರ್ಡ್ ಗಳಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯದ ಬೆನ್ನಲ್ಲೇ ಇದೀಕ ಕೇಂದ್ರ ಸರ್ಕಾರ ಚಾಲನಾ ಪರವಾನಗಿಗಳಿಗೂ ಆಧಾರ್ ಜೋಡಣೆ ಕಡ್ಡಾಯ ಮಾಡುವ ಕುರಿತು ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಸ್ವತಃ ಕೇಂದ್ರ ಸರ್ಕಾರವೇ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ಚಾಲನಾ ಪರವಾನಿಗೆಯೊಂದಿಗೆ ಆಧಾರ್ ಜೋಡಣೆಯ ಪ್ರಕ್ರಿಯೆಯಲ್ಲಿ ತೊಡಗಿರುವುದಾಗಿ ಸುಪ್ರಿಂ ಕೋರ್ಟ್‌ಗೆ ಬುಧವಾರ ತಿಳಿಸಿದೆ. ಮುಖ್ಯವಾಗಿ
ನಕಲಿ ಪರವಾನಗಿಗಳನ್ನು ನಾಶಪಡಿಸಲು ಹಾಗೂ ಎಲ್ಲ ರಾಜ್ಯಗಳಲ್ಲಿ ನೀಡಲಾದ ಪರವಾನಗಿಗಳನ್ನು ಜೋಡಿಸಲು ಸಾಫ್ಟ್‌ವೇರ್ ಅನ್ನು ಸಿದ್ಧಪಡಿಸುವ ಗುರಿ ಹೊಂದಲಾಗಿದೆ ಎಂದು ಸುಪ್ರೀಂ ಕೋರ್ಟ್ ನಿಯೋಜಿತ ಸಮಿತಿ ಮುಂದೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಆಧಾರ್ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನ ಮತ್ತೊಂದು ಪೀಠಕ್ಕೆ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಕೆ ಮಾಡಿ ಮಾಹಿತಿ ನೀಡಿದ್ದು, ಅದರನ್ವಯ ‘ಸಾರಥಿ-4’ ಎಂಬ ಹೆಸರಿನ ಸಾಫ್ಟ್‌ವೇರ್ ಅನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ ಸಿದ್ಧಪಡಿಸುತ್ತಿದೆ ಎಂದು ಹೇಳಿದೆ. "ಈ ಸಾಫ್ಟ್‌ವೇರ್ ನೈಜ ಸಮಯದ ಆಧಾರದಲ್ಲಿ ಎಲ್ಲ ರಾಜ್ಯಗಳನ್ನು ಒಳಗೊಳ್ಳಲ್ಲಿದ್ದು, ಇದರಿಂದ ದೇಶದಲ್ಲಿ ಯಾರೊಬ್ಬರೂ ನಕಲಿ ಪರವಾನಿಗೆ ಪಡೆಯಲು ಸಾಧ್ಯವಿಲ್ಲ’’ ಎಂದು ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಕೆ.ಎಸ್. ರಾಧಾಕೃಷ್ಣನ್ ಅವರ ನೇತೃತ್ವದ ರಸ್ತೆ ಸುರಕ್ಷತೆಗಿರುವ ಸಮಿತಿಗೆ ಕೇಂದ್ರಸರ್ಕಾರ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್ಕೇಂದ್ರ ಸರ್ಕಾರಆಧಾರ್driving licenceಚಾಲನಾ ಪರವಾನಗಿAadhaarunion Government
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


