ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣದ ವೇಳೆ ಘೋಷಣೆ ಕೂಗುವಂತೆ ಉಪಾಯ ನೀಡಿದ್ದ ರಾಹುಲ್!
ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಘೋಷಣೆ ಕೂಗುವಂತೆ ಕಾಂಗ್ರೆಸ್ ಅಧ್ಯಕ್ಷ...

Published On :
ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಘೋಷಣೆ ಕೂಗುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸಂಸದರಿಗೆ ಸೂಚನೆ ನೀಡಿದ್ದರು ಎಂದು ಹೇಳಲಾಗುತ್ತಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಸಂಸತ್ ನ ಲೋಕಸಭಾ ಕಲಾಪದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್ ಸಂಸದರು, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನೂ ಕೂಗುತ್ತಿದ್ದರು. ಇದು ಕಲಾಪದ ನೇರ ದೃಶ್ಯಾವಳಿಯ ಸಂದರ್ಭದಲ್ಲೂ ದಾಖಲಾಗಿತ್ತು. ಕಾಂಗ್ರೆಸ್ ಸಂಸದರ ಈ ನಡೆ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸೂಚನೆ ಇತ್ತು ಎಂಬ ಮಾಹಿತಿ ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವಾಗ ಅವರಿಗೆ ಅಡ್ಡಿಪಡಸಲೆಂದು ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದರಿಗೆ ಸೂಚನೆ ನೀಡಿದ್ದರಂತೆ. ಅದರಂತೆ ಭಾಷಣದ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ವಿಷಯಾಧರಿತ ಘೋಷಣೆ ಕೂಗುವಂತೆ ಸೂಚನೆ ನೀಡಿದ್ದರಂತೆ. ಇದಕ್ಕೆ ಇಂಬು ನೀಡುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರೂ ಕೂಡ ಮಧ್ಯಾಹ್ಮ 12 ಗಂಟೆ ವೇಳೆಗೆ ಕಾಂಗ್ರೆಸ್ ಪಕ್ಷದ ಎಲ್ಲ ಸದಸ್ಯರಿಗೂ ಕಲಾಪಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದರಂತೆ.
ಈ ಪೈಕಿ ಕೆಲ ಸಂಸದರು ಪೂರ್ವಭಾವಿ ಸಿದ್ಧತೆ ಮಾಡಿಕೊಂಡೇ ಸದನಕ್ಕೆ ಆಗಮಿಸಿದ್ದರು. ಬಿಳಿ ಹಾಳೆಗಳ ಮೇಲೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಬರೆದು ಅದನ್ನು ಕಲಾಪಕ್ಕೆ ತಂದಿದ್ದರು. ಇಷ್ಟೇ ಪ್ರಧಾನಿ ಮೋದಿ ಭಾಷಣದ ವೇಳೆ ಕಾಂಗ್ರೆಸ್ ಸಂಸದರು ಘೋಷಣೆಗಳನ್ನೂ ಕೂಗಿ-ಕೂಗಿ ಅವರ ಗಂಟಲು ಕೆಡದ ಹಾಗೆ ನೋಡಿಕೊಳ್ಳಲು ಸೋನಿಯಾಗಾಂಧಿ ಅವರು ಟಾಫಿಗಳನ್ನೂ (ಚಾಕಲೇಟ್)ಗಳನ್ನೂ ಕೂಡ ಕಾಂಗ್ರೆಸ್ ಸಂಸದರಿಗೆ ನೀಡಿದ್ದರಂತೆ. ಅಷ್ಚೇ ಯಾವ ವಿಚಾರದ ಕುರಿತು ಘೋಷಣೆ ಕೂಗಬೇಕು ಯಾವ ಘೋಷಣೆ ಕೂಗಬೇಕು ಎಂಬಿತ್ಯಾದಿ ಅಂಶಗಳು ಮೊದಲೇ ನಿರ್ಧಾರವಾಗಿತ್ತು ಎಂದು ಕಾಂಗ್ರೆಸ್ ಸಂದರೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ನಿನ್ನೆ ಸಂಸತ್ ನ ಲೋಕಸಭಾ ಕಲಾಪದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


