ಮುಂಬೈ: ಸಚಿನ್ ಪುತ್ರಿ ಸಾರಾ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿದ್ದ ಟೆಕಿ ಬಂಧನ
ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರಿದ್ದ ಮುಂಬೈ ಮೂಲದ ಟೆಕ್ಕಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

Published On :
ಮುಂಬೈ: ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರಿದ್ದ ಮುಂಬೈ ಮೂಲದ ಟೆಕ್ಕಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ನಿತಿನ್ ಶಿಶೋಡ್ ಎಂಬಾತನನ್ನು ಅಂಧೇರಿಯಲ್ಲಿ ಬಂಧಿಸಲಾಗಿದ್ದು, ಪ್ರಸ್ತುತ ಆತನನ್ನು ವಿಚಾರಣೆಗೊಳಪಡಿಸಲಾಗಿದೆ. ಈ ಹಿಂದೆ ಸಚಿನ್ ಪುತ್ರಿ ಸಾರಾ ಹೆಸರಲ್ಲಿ ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿಗಳನ್ನು ಉದ್ದೇಶಿಸಿ ಟ್ವೀಟ್ ಮಾಡುವ ಮೂಲಕ ಸಚಿನ್ ಕುಟುಂಬ ತೀವ್ರ ಮುಜುಗರಕ್ಕೊಳಗಾಗುವಂತೆ ಮಾಡಿದ್ದ. ಪ್ರಮುಖವಾಗಿ ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಶರದ್ ಪವಾರ್ ಮತ್ತು ಅವರ ಪಕ್ಷದ ಕುರಿತು ಅವಹೇಳನಕಾರಿ ಟ್ವೀಟ್ ಹರಿಬಿಟ್ಟಿದ್ದ.
ಈ ಟ್ವೀಟ್ ವ್ಯಾಪಕ ವೈರಲ್ ಆದ ಬೆನ್ನಲ್ಲೇ ಸ್ವತಃ ಸಚಿನ್ ತೆಂಡೂಲ್ಕರ್ ಅವರು, ಮುಂಬೈ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಅಲ್ಲದೆ ತಮ್ಮ ಪುತ್ರ ಅರ್ಜುನ್ ಮತ್ತು ಸಾರಾ ಹೆಸರಲ್ಲಿರುವ ನಕಲಿ ಟ್ವಿಟರ್ ಖಾತೆಯನ್ನು ಫಾಲೋ ಮಾಡದಂತೆ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈSachin TendulkarCrimeಅಪರಾಧSara Tendulkarಸಾರಾ ತೆಂಡೂಲ್ಕರ್fake twitter accountನಕಲಿ ಟ್ವಿಟರ್ ಖಾತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


