ದೇಶ

ಆಂಧ್ರ ಪ್ರದೇಶ ಭಾರತದ ಭಾಗವಲ್ಲವೆಂದು ಕೇಂದ್ರ ಭಾವಿಸಿದೆ: ಚಂದ್ರಬಾಬು ನಾಯ್ಡು

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಫೆಬ್ರವರಿ 1ರಂದು ಮಂಡಿಸಿದ ಬಜೆಟ್ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ....

ಆಂಧ್ರ ಪ್ರದೇಶ ಭಾರತದ ಭಾಗವಲ್ಲವೆಂದು ಕೇಂದ್ರ ಭಾವಿಸಿದೆ: ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
Published On :
ನವದೆಹಲಿ/ವಿಜಯವಾಡ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಫೆಬ್ರವರಿ 1ರಂದು ಮಂಡಿಸಿದ ಬಜೆಟ್ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು, ಕೇಂದ್ರ ಸರ್ಕಾರ ಆಂಧ್ರ ಪ್ರದೇಶ ಭಾರತದ ಭಾಗವಲ್ಲ ಎಂದು ಭಾವಿಸಿದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
ಆಂಧ್ರ ಪ್ರದೇಶದ ಜನತೆ ಭಾರತೀಯರಲ್ಲ ಎಂಬ ರೀತಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ನಾಯ್ಡು ಹೇಳಿದ್ದು, ಕೇಂದ್ರದ ಈ ಧೋರಣೆ ಖಂಡಿಸಿ ಸಂಸತ್ತಿನಲ್ಲಿ ಪ್ರತಿಭಟನೆ ಮುಂದುವರೆಸುವಂತೆ ಟಿಡಿಪಿ ಸಂಸದರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಸರ್ಕಾರ 2018-19ನೇ ಸಾಲಿನ ಬಜೆಟ್ ನಲ್ಲಿ ಆಂಧ್ರ ಪ್ರದೇಶದಲ್ಲಿ ಕಡಿಮೆ ಅನುದಾನ ನೀಡಿದ್ದರಿಂದ ಅಸಮಾಧಾನಗೊಂಡ ಟಿಡಿಪಿ ಅಧ್ಯಕ್ಷರೂ ಆಗಿರುವ ಚಂದ್ರಬಾಬು ನಾಯ್ಡು ಅವರು, ಆಂಧ್ರ ಪ್ರದೇಶದ ಇಬ್ಬರು ಸಚಿವರು ಸೇರಿದಂತೆ ಟಿಡಿಪಿ ಸಂಸದರೊಂದಿಗೆ ಟೆಲೆ ಕಾನ್ಫೆರೆನ್ಸ್ ಸಭೆ ನಡೆಸಿ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದರು.
ನಾಯ್ಡು ಅವರು ಸದ್ಯ ದುಬೈ ಪ್ರವಾಸದಲ್ಲಿದ್ದು, ಆಂಧ್ರದ ಬೇಡಿಕೆ ಈಡೇರಿಸುವವರೆಗೆ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುವಂತೆ ತಮಗೆ ಸೂಚಿಸಿರುವುದಾಗಿ ಚಿಡಿಪಿ ಸಂಸದ ತೋಟ ನರಸಿಂಹಮ್ ಅವರು ಹೇಳಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಕಡಿಮೆ ಅನುದಾನ ನೀಡಿದ ಕೇಂದ್ರ ಸರ್ಕಾರ ನಿರ್ಧಾರ ಖಂಡಿಸಿ ನಿನ್ನೆ ವಿವಿಧ ರಾಜಕೀಯ ಪಕ್ಷಗಳು ಆಂಧ್ರ ಪ್ರದೇಶ ಬಂದ್ ಗೆ ಕರೆ ನೀಡಿದ್ದವು, ಬಂದ್ ನಿಂದಾಗಿ ರಾಜ್ಯಾದ್ಯಂತ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.