ಕಣಿವೆ ರಾಜ್ಯದಲ್ಲಿ ಪಾಕ್‍ನಿಂದ ಗುಂಡಿನ ದಾಳಿ; 3 ಭಾರತೀಯ ಯೋಧರಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಈ ಗುಂಡಿನ...

Published On :
ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಈ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ.
ಅಂತಾರಾಷ್ಟ್ರೀಯ ಗಡಿಯ ಕೃಷ್ಣಗಾಟಿ ಸೆಕ್ಟರ್ ಬಳಿ ಪಾಕ್ ಸೈನಿಕರು ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಭಾರತೀಯ ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ.
ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರಿಗೆ ಸಣ್ಣ ಗಾಯಗಳಾಗಿದ್ದು ಅವರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಗಡಿಯಲ್ಲಿ ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ 45 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರಗುಂಡಿನ ದಾಳಿJammu and KashmirPoonchಪೂಂಚ್ಭಾರತೀಯ ಸೇನೆShelling
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


