ಆರೋಗ್ಯ ಸೂಚ್ಯಂಕ: ಕೇರಳಕ್ಕೆ ಮೊದಲ ಸ್ಥಾನ, ಉತ್ತರ ಪ್ರದೇಶ ಅತ್ಯಂತ ಕಳಪೆ
ನೀತಿ ಆಯೋಗ ಸಿದ್ಧಪಡಿಸಿರುವ ಆರೋಗ್ಯ ಸೂಚ್ಯಂಕ ವರದಿ ಶುಕ್ರವಾರ ಬಿಡುಗಡೆಯಾಗಿದ್ದು, ಕೇರಳ ಮೊದಲ ಸ್ಥಾನ ಪಡೆದಿದೆ....

Published On :
ನವದೆಹಲಿ: ನೀತಿ ಆಯೋಗ ಸಿದ್ಧಪಡಿಸಿರುವ ಆರೋಗ್ಯ ಸೂಚ್ಯಂಕ ವರದಿ ಶುಕ್ರವಾರ ಬಿಡುಗಡೆಯಾಗಿದ್ದು, ಕೇರಳ ಮೊದಲ ಸ್ಥಾನ ಪಡೆದಿದೆ. ಪಂಜಾಬ್ ಮತ್ತು ತಮಿಳುನಾಡು ಎರಡನೇ ಹಾಗೂ ಮೂರನೇ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶ ಅತ್ಯಂತ ಕಳಪೆ ಸಾಧನೆ ಮಾಡಿರುವುದು ವರದಿಯಲ್ಲಿ ಬಹಿರಂಗವಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಜಾರ್ಖಂಡ್ ಉತ್ತಮ ಪ್ರಗತಿ ತೋರಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಮತ್ತು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ವರದಿ ವಿವರಿಸಿದೆ.
ಆದಾಗ್ಯೂ, ಸೂಚ್ಯಂಕದಲ್ಲಿ ಉನ್ನತ ಸ್ಥಾನದಲ್ಲಿರುವ ರಾಜ್ಯಗಳು ಮೈಮರೆಯದಂತೆ ಹಾಗೂ ಗುಣಮಟ್ಟವನ್ನು ಅದೇ ರೀತಿ ಕಾಪಾಡಿಕೊಳ್ಳುವಂತೆ ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


