ದೇಶ

ಆರ್ಥಿಕ ಬೆಳವಣಿಗೆ ದರ ಕುಸಿತ: ಎನ್ ಡಿಎ ಸರ್ಕಾರದ ವಿರುದ್ಧ ಚಿದಂಬರಂ ವಾಗ್ದಾಳಿ

ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ದರ ಕುಸಿತಗೊಂಡಿದ್ದು, ಯುಪಿಎ ಸರ್ಕಾರದ 10 ವರ್ಷಗಳ ಸರಾಸರಿಗಿಂತಲೂ ಕಡಿಮೆಮಟ್ಟದಲ್ಲಿದೆ ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

ಆರ್ಥಿಕ ಬೆಳವಣಿಗೆ ದರ ಕುಸಿತ: ಎನ್ ಡಿಎ ಸರ್ಕಾರದ ವಿರುದ್ಧ ಚಿದಂಬರಂ ವಾಗ್ದಾಳಿ
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ (ಸಾಂದರ್ಭಿಕ ಚಿತ್ರ)
Published On :

ನವದೆಹಲಿ:  ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ದರ ಕುಸಿತಗೊಂಡಿದ್ದು, ಯುಪಿಎ ಸರ್ಕಾರದ 10 ವರ್ಷಗಳ  ಸರಾಸರಿಗಿಂತಲೂ ಕಡಿಮೆಮಟ್ಟದಲ್ಲಿದೆ ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ  ವಾಗ್ದಾಳಿ ನಡೆಸಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆ ದರ  30 ವರ್ಷಗಳ ಸರಾಸರಿಯಲ್ಲಿ  ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್ ಮಾಜಿ ಮುಖ್ಯಸ್ಥ, ಆರ್ಥಿಕ ತಜ್ಞ ಕೌಶಿಕ್ ಬಸು ಹೇಳಿದ್ದಾರೆ  ಆದರೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಆರ್ಥಿಕ ಬೆಳವಣಿಗೆ ದರ ಉತ್ತಮವಾಗಿದೆ ಎಂದು ಹೇಳುತ್ತಿದ್ದಾರೆ ಎಂದು ಚಿದಂಬರಂ ಮಾಡಿರುವ ಸರಣಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಎನ್ ಡಿಎ ಸರ್ಕಾರದ ನಾಲ್ಕು ವರ್ಷಗಳ ಅವಧಿಯ ಸರಾಸರಿ ಎಷ್ಟು ಎಂದು ಚಿದಂಬರಂ ಪ್ರಶ್ನಿಸಿದ್ದು, ಯುಪಿಎಯ 10 ವರ್ಷಗಳ ಸರಾಸರಿಗಿಂತಲೂ ಕಡಿಮೆಯಾಗಿದೆ. ಆರ್ಥಿಕ ಬೆಳವಣಿಗೆ ಬಗ್ಗೆ ಎನ್ ಡಿಎ ದೂರದೃಷ್ಟಿ ಏನು, ಹೂಡಿಕೆ, ಉಳಿತಾಯ, ಪಾವತಿ ಪ್ರಮಾಣ ಎಲ್ಲವೂ ಕುಂಠಿತಗೊಂಡಿದೆ ಎಂದು ಆರೋಪಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯ ಮೊದಲ ಮೂರು ವರ್ಷಗಳಲ್ಲಿ ಭಾರತದ ಬೆಳವಣಿಗೆ ದರ ಶೇಕಡ 7.5ರಷ್ಟಿತ್ತು. ಆದರೆ  ಇಂದಿನ ಆರ್ಥಿಕ ಬೆಳವಣಿಗೆ ದರ 2.5 ಟ್ರಿಲಿಯನ್ ಡಾಲರ್ ನಷ್ಟಿದ್ದು,ಭಾರತ ವಿಶ್ವದ ಏಳನೇ ಅತಿದೊಡ್ಡ ರಾಷ್ಟ್ರವಾಗಿದೆ ಎಂದಿದ್ದಾರೆ.

ಜಿಎಸ್ ಟಿ ಹಾಗೂ ಆಧಾರ್ ಯೋಜನೆಗಳಲ್ಲಿ ರಚನಾತ್ಮಕ ಸುಧಾರಣೆ ತಂದಿರುವುದಾಗಿ ಅರುಣ್ ಜೇಟ್ಲಿ ಹೇಳುತ್ತಾರೆ. ಆದರೆ, ಇವೆಲ್ಲವೂ  ಯುಪಿಎ ಸರ್ಕಾರದ ಕೊಡುಗೆಗಳಾಗಿವೆ. ಇವುಗಳ ಬಗ್ಗೆ ಚರ್ಚೆ ನಡೆದರೆ ಸೂಕ್ತ ಉತ್ತರ ನೀಡಲಿದ್ದು, ಯುಪಿಎ ಹಾಗೂ ಎನ್ ಡಿಎಸರ್ಕಾರಗಳ ವ್ಯತ್ಯಾಸ ತಿಳಿಯಬಹುದಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.