ಮರಾಠಿ ನಿರ್ದೇಶಕ ದಿಲೀಪ್ ಕೊಠಾರಿ ಪತ್ನಿಯ ಮೃತದೇಹ ಪತ್ತೆ, ಕೊಲೆ ಶಂಕೆ
ಖ್ಯಾತ ಮರಾಠಿ ರಂಗಭೂಮಿ ಮತ್ತು ಚಲನಚಿತ್ರ ನಿರ್ದೇಶಕ ದಿಲೀಪ್ ಕೊಠಾರಿ ಅವರ ಪತ್ನಿಯ ಮೃತದೇಹ ಅವರ ಫ್ಲಾಟ್ ನಲ್ಲಿ ಪತ್ತೆಯಾಗಿದ್ದು,....

Published On :
ಪುಣೆ: ಖ್ಯಾತ ಮರಾಠಿ ರಂಗಭೂಮಿ ಮತ್ತು ಚಲನಚಿತ್ರ ನಿರ್ದೇಶಕ ದಿಲೀಪ್ ಕೊಠಾರಿ ಅವರ ಪತ್ನಿಯ ಮೃತದೇಹ ಅವರ ಫ್ಲಾಟ್ ನಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ದಿಲೀಪ್ ಕೊಠಾರಿ ಅವರ 65 ವರ್ಷದ ಪತ್ನಿ ದೀಪಾಲಿ ಕೊಠಾರಿ ಅವರು ಗುರುವಾರ ಶವವಾಗಿ ಪತ್ತೆಯಾಗಿದ್ದು, ಇದೊಂದು ಆಕಸ್ಮಿಕ ಸಾವು ಎಂದು ಅವರ ಅಳಿಯ ಹೇಳಿದ್ದಾರೆ. ಆದರೆ ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ, ಬುಧವಾರ ಮಧ್ಯರಾತ್ರಿ ದೀಪಾಲಿ ಮೃತಪಟ್ಟಿದ್ದು, ಆಕೆಯ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಮತ್ತು ದೇಹದ ಮೇಲೆ ಸುಟ್ಟ ಗಾಯಗಳು ಪತ್ತೆಯಾಗಿವೆ.
ದೀಪಾಲಿಯನ್ನು ಹೊಡೆದು ಸಾಯಿಸಿರುವ ಸಾಧ್ಯತೆ ಇದೆ ಎಂದು ಮರಣೋತ್ತರ ವರದಿ ತಿಳಿಸಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪುಣೆ ಪೊಲೀಸರು, ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


