ಸುಂಜವಾನ್ ದಾಳಿ: ಬೆನ್ನಿಗೆ ಉಗ್ರ ಸಿಡಿಸಿದ ಗುಂಡು ಹೊಕ್ಕರೂ ಮಗುವಿಗೆ ಜನ್ಮ ನೀಡಿದ ಗರ್ಭಿಣಿ ಮಹಿಳೆ!
ಜಮ್ಮು ಕಾಶ್ಮೀರದ ಹೊರವಲಯದ ಸಂಜ್ವಾನ್ನಲ್ಲಿರುವ ಸೇನಾ ಸಿಬ್ಬಂದಿ ವಸತಿ ಸಮುಚ್ಛಯದ ಮೇಲೆ ಉಗ್ರರು ದಾಳಿ ನಡೆಸಿರುವಂತೆಯೇ ಗುಂಡೇಟು ತಗುಲಿದ ತುಂಬು ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

Published On :
ಶ್ರೀನಗರ: ಜಮ್ಮು ಕಾಶ್ಮೀರದ ಹೊರವಲಯದ ಸಂಜ್ವಾನ್ನಲ್ಲಿರುವ ಸೇನಾ ಸಿಬ್ಬಂದಿ ವಸತಿ ಸಮುಚ್ಛಯದ ಮೇಲೆ ಉಗ್ರರು ದಾಳಿ ನಡೆಸಿರುವಂತೆಯೇ ಗುಂಡೇಟು ತಗುಲಿದ ತುಂಬು ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.
ಶನಿವಾರ ಜೈಶ್ ಎ ಮೊಹಮ್ಮದ್ ಉಗ್ರರು ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯ ಕೆಳ ಭಾಗಕ್ಕೆ ಗುಂಡು ಹೊಕ್ಕಿದ್ದರೂ ಮಹಿಳೆ ಪಪಾಡ ಸದೃಶವಾಗಿ ಪಾರಾಗಿದ್ದು, 35 ವಾರಗಳ ತುಂಬು ಗರ್ಭಿಣಿಯನ್ನು ಏರ್ ಲಿಫ್ಟ್ ಮೂಲಕ ತುರ್ತಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ದಾಳಿ ನಡೆದ ಕೂಡಲೆ ಸೇನಾ ಪಡೆಗಳು ಹೆಲಿಕ್ಯಾಪ್ಟರ್ ಬಳಸಿ ಸೇನಾ ಆಸ್ಪತ್ರೆಗೆ ದಾಖಲಿಸಿದ್ದರು.
ಶಸ್ತ್ರ ಚಿಕಿತ್ಸೆ ನಡೆಸಿ ಮಗುವನ್ನು ಹೊರತೆಗೆಯಲಾಗಿದ್ದು, ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹೆಣ್ಣು ಮಗು 2.5 ಕೆ.ಜಿ ತೂಕವಿದ್ದು ಆರೋಗ್ಯವಾಗಿದೆ. ಅಂತೆಯೇ ತಾಯಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರTerror AttackJammu and Kashmirಭಾರತೀಯ ಸೇನೆಉಗ್ರದಾಳಿSunjwan Army campಸುಂಜವಾನ್ ಸೇನಾ ಕ್ಯಾಂಪ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


