ದೇಶ

ಮಹಾಶಿವರಾತ್ರಿಯಂದು ಶಿವನ ದೇಗುಲಗಳ ಮೇಲೆ ದಾಳಿಗೆ ಉಗ್ರರ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ

ಮಹಾಶಿವರಾತ್ರಿ ಹಬ್ಬದ ದಿನದಂದು ದೇಶದಲ್ಲಿರುವ ವಿವಿಧ ಶಿವನ ದೇಗುಲಗಳಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರ ಸಂಘಟನೆಗಳು ಸಂಚು ರೂಪಿಸುತ್ತಿದ್ದಾರೆಂದು ಕೇಂದ್ರ ಗುಪ್ತಚರ ಇಲಾಖೆ ಸೋಮವಾರ ಎಚ್ಚರಿಕೆ ನೀಡಿದೆ...

ಮಹಾಶಿವರಾತ್ರಿಯಂದು ಶಿವನ ದೇಗುಲಗಳ ಮೇಲೆ ದಾಳಿಗೆ ಉಗ್ರರ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ
ಸಂಗ್ರಹ ಚಿತ್ರ
Published On :
ನವದೆಹಲಿ: ಮಹಾಶಿವರಾತ್ರಿ ಹಬ್ಬದ ದಿನದಂದು ದೇಶದಲ್ಲಿರುವ ವಿವಿಧ ಶಿವನ ದೇಗುಲಗಳಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರ ಸಂಘಟನೆಗಳು ಸಂಚು ರೂಪಿಸುತ್ತಿದ್ದಾರೆಂದು ಕೇಂದ್ರ ಗುಪ್ತಚರ ಇಲಾಖೆ ಸೋಮವಾರ ಎಚ್ಚರಿಕೆ ನೀಡಿದೆ.
ಮಹಾಶಿವರಾತ್ರಿ ಹಿನ್ನಲೆಯಲ್ಲಿ ಶಿವನ ದೇಗುಲಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ಹಿನ್ನಲೆಯಲ್ಲಿ ದೇಗುಲಗಳ ಮೇಲೆ ಕೆಂಗಣ್ಣು ಬೀರಿರುವ ಉಗ್ರರು ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. 
ಮಹಾರಾಷ್ಟ್ರ, ಪಂಜಾಬ್, ಹರಿಯಾಣ, ಜಮ್ಮು, ಉತ್ತರಪ್ರದೇಶ, ರಾಜಸ್ತಾನ, ಗುಜರಾತ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿರುವ ಶಿವನ ದೇಗುಲಗಳು, ಪ್ರಮುಖಾವಾಗಿ ಜ್ಯೋತಿರ್ಲಿಂಗ ದೇಗಲಗಳನ್ನು ಉಗ್ರರು ಗುರಿಯಾಗಿರಿಸಿಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ. 
ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಮಹಾರಾಷ್ಟ್ರ ಪೊಲೀಸರು ಭಾರತದ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾೈಗಿಲುವ ನಾಶಿಕ್ ತ್ರಿಂಬಕೇಶ್ವರ ದೇಗುಲದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. 
ಮಹಾಶಿವರಾತ್ರಿಯು ಹಿಂದೂಗಳ ಹಬ್ಬಗಳಲ್ಲಿ ಪ್ರಮುಖವಾದ ಹಬ್ಬವಾಗಿದೆ. ಮಹಾ ಶಿವರಾತ್ರಿ ಹಬ್ಬವನ್ನು ಮಾಘ ಮಾಸದ ಬಹುಳ/ಕೃಷ್ಣ ಪಕ್ಷದಲ್ಲಿ ಚತುರ್ದಶಿಯಂದು ಆಚರಿಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.