ಕದನ ವಿರಾಮ ಉಲ್ಲಂಘನೆ: ಪಾಕ್ ದಾಳಿ ವೇಳೆ ಗಾಯಗೊಂಡಿದ್ದ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಫೆ.4 ರಂದು ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮರಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ...

Published On :
ಉಧಂಪುರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಫೆ.4 ರಂದು ಪಾಕಿಸ್ತಾನ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮರಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಗುನ್ನೆರ್ ಕಿಶೋರ್ ಕುಮಾರ್ ಮುನ್ನಾ ಹುತಾತ್ಮರಾದ ಯೋಧರಾಗಿದ್ದು, ಇವರು ಬಿಹಾರದ ಬರ್ಮಹಾ ಗ್ರಾಮದವರಾಗಿದ್ದಾರೆ.
ಗುನ್ನೆರ್ ಕಿಶೋರ್ ಅವರು ವೀರ ಯೋಧರಾಗಿದ್ದು, ದೇಶಕ್ಕಾಗಿ ಅವರ ತ್ಯಾಗವನ್ನು ದೇಶ ಎಂದಿಗೂ ನೆನೆಯುತ್ತದೆ ಎಂದು ಸೇನಾ ವಕ್ತಾರ ಹೇಳಿದ್ದಾರೆ.
ಫೆ.4 ರಂದು ಪಾಕಿಸ್ತಾನ ಸೇನೆ ಪೂಂಜ್ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ದಾಳಿಯಲ್ಲಿ ಯೋಧ ಕಿಶೋರ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಉಧಂಪುರದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಹುತಾತ್ಮರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationArmyಸೇನೆಕದನ ವಿರಾಮ ಉಲ್ಲಂಘನೆmartyrಹುತಾತ್ಮjammu-kashmir
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


