ಕೆಲವರು ಪ್ರಧಾನಿ ಮೋದಿಯವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ: ಓವೈಸಿ
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದ ಮೌಲಾನಾ ಸಲ್ಮಾನ್ ಹುಸೇನ್ ನಧ್ವಿ ವಿರುದ್ಧ ತೀವ್ರವಾಗಿ ಕಿಡಿಕಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕೆಲವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಳಕ್ಕೆ ಕುಣಿಯುತ್ತಿದ್ದಾರೆಂದು ಸೋಮವಾರ ಹೇಳಿದ್ದಾರೆ...

Published On :
ಹೈದರಾಬಾದ್: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದ ಮೌಲಾನಾ ಸಲ್ಮಾನ್ ಹುಸೇನ್ ನಧ್ವಿ ವಿರುದ್ಧ ತೀವ್ರವಾಗಿ ಕಿಡಿಕಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕೆಲವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಳಕ್ಕೆ ಕುಣಿಯುತ್ತಿದ್ದಾರೆಂದು ಸೋಮವಾರ ಹೇಳಿದ್ದಾರೆ.
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಅವರು, ನಧ್ವಿಯವರ ಹೆಸರನ್ನು ಹೇಳದೆಯೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಕೆಲವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಬಾಬ್ರಿ ಮಸೀದಿಯನ್ನು ಬಿಟ್ಟುಕೊಡುವ ಮಾತುಗಳನ್ನು ಆಡುವವರನ್ನು ಸಾಮಾಜಿಕವಾಗಿ ಬಹಿಷ್ಕರಿಸಬೇಕೆಂದು ಹೇಳಿದ್ದಾರೆ.
ದೇಶದಲ್ಲಿ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಅವರು (ನಧ್ವಿ) ಹೇಳುತ್ತಿದ್ದಾರೆ. ಬಾಬ್ರಿ ಮಸೀದಿಯನ್ನು ಬಿಟ್ಟುಕೊಡುವ ಮಾತುಗಳನ್ನಾಡುತ್ತಿರುವವರು ಅರಬ್ ನಲ್ಲಿರುವ ಮಸೀದಿ-ಇ-ಅಕ್ಸಾವನ್ನು ಬಿಟ್ಟುಕೊಡಬೇಕು. ಸಿರಿಯಾ, ಇರಾಕ್ ಹಾಗೂ ಇತರೆ ದೇಶಗಳಲ್ಲಿ ಮುಸ್ಲಿಮರ ನರಮೇಧ ನಡೆಸುತ್ತಿರುವ ಇಸಿಸ್ ಉಗ್ರ ಸಂಘಟನೆಗೆ ನಧ್ವಿಯವರು ಬೆಂಬಲ ಸೂಚಿಸಿದ್ದಾರೆ. ಇಸಿಸ್ ಪರವಾಗಿ ಫತ್ವಾ ಹೊರಡಿಸುವವರಿಗೆ ಪ್ರಧಾನಿ ಮೋದಿಯವರು ರಾಜಕೀಯ ಪ್ರೋತ್ಸಾಹ ನೀಡುತ್ತಿದ್ದಾರೆ. ಪ್ರಧಾನಿ ಮೋದಿಯವರ ತಾಳಕ್ಕೆ ಕುಣಿಯುತ್ತಿರುವವರು ತಮ್ಮ ಪ್ರಯತ್ನಗಳಲ್ಲಿ ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ವಿವಾದಿತ ರಾಮ ಜನ್ಮಭೂಮಿ ಸ್ಥಳದಲ್ಲಿ ರಾಮ ಮಂದಿನ ನಿರ್ಮಾಣವಾಗಬೇಕು. ಧ್ವಂಸಗೊಂಡ ಬಾಬ್ರಿ ಮಸೀದಿಯು ಬೇರೆ ಸ್ಥಳದಲ್ಲಿ ನಿರ್ಮಾಣವಾಗಬೇಕು ಎಂದು ಹೇಳಿದ್ದ ಮೌಲ್ವಿ ಸ್ಮಾನ್ ನದ್ವಿ ಅವರನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್'ಬಿ) ಕಾರ್ಯಕಾರಿಣಿ ಸದಸ್ಯತ್ವದಿಂದ ನಿನ್ನೆಯಷ್ಟೇ ವಜಾ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ModiBabri MasjidRam templeAyodhyaಅಯೋಧ್ಯೆAsaduddin Owaisiಮೋದಿರಾಮ ಮಂದಿರAIMIMಅಸಾದುದ್ದೀನ್ ಓವೈಸಿಎಐಎಂಐಎಂಬಾಬ್ರಿ ಮಸೀದಿNadviನಧ್ವಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


