ದೇಶ

ಶೋಪಿಯಾನ್ ಗುಂಡಿನ ದಾಳಿ: ಸೇನೆ ವಿರುದ್ಧ ದಾಖಲಾಗಿದ್ದ ಎಫ್ಐಆರ್'ಗೆ 'ಸುಪ್ರೀಂ' ತಡೆ

ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿಗೆ ನಾಗರೀಕರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ ಪಡೆಗಳ ವಿರುದ್ಧ...

ಶೋಪಿಯಾನ್ ಗುಂಡಿನ ದಾಳಿ: ಸೇನೆ ವಿರುದ್ಧ ದಾಖಲಾಗಿದ್ದ ಎಫ್ಐಆರ್'ಗೆ 'ಸುಪ್ರೀಂ' ತಡೆ
ಸಂಗ್ರಹ ಚಿತ್ರ
Published On :
ನವದೆಹಲಿ: ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿಗೆ ನಾಗರೀಕರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ ಪಡೆಗಳ ವಿರುದ್ಧ ದಾಖಲಿಸಿಕೊಂಡಿದ್ದ ಎಫ್ಐಆರ್'ಗೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ. 
ಶೋಪಿಯಾನ್ ಜಿಲ್ಲೆಯಲ್ಲಿ ಕಲ್ಲುತೂರಾಟಗಾರರ ಮೇಲೆ ಭದ್ರತಾ ಪಡೆಗಳು ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ನಾಗರೀಕರು ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೇಜರ್ ಆದಿತ್ಯ ಕುಮಾರ್ ಸೇರಿದಂತೆ ಇನ್ನಿತರೆ ಸೇನಾಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಿಸಿದ್ದರು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಆದಿತ್ಯ ಕುಮಾರ್ ಅವರ ತಂದೆ, ಪ್ರಕರಣ ಸಂಬಂಧ ಆದಿತ್ಯ ಅವರಿಗೆ ರಿಲೀಫ್ ನೀಡುವಂತೆ ಕೋರಿ ಸುಪ್ರೀಂಕೋರ್ಟ್'ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಲು ಸಮ್ಮತಿ ನೀಡಿರುವ ಸುಪ್ರೀಂಕೋರ್ಟ್, ಫೆ.12 ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. 
ಇದರಂತೆ ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಜಮ್ಮು ಮತ್ತು ಕಾಶ್ಮೀರ ಸರ್ಕಾರ ದಾಖಲಿಸಿದ್ದ ಎಫ್ಐಆರ್'ಗೆ ತಡೆಯಾಜ್ಞೆ ನೀಡಿದ್ದು, ಜಮ್ಮು ಮತ್ತು ಕಾಶ್ಮೀರ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ, ಎರಡು ವಾರಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.