ತ್ರಿಪುರಾದಲ್ಲಿ ಬಿಜೆಪಿ ಗೆದ್ದರೆ ಬಡಜನರಿಗೂ ಕೇಂದ್ರದ ಯೋಜನೆಗಳು ತಲುಪಲಿವೆ : ಯೋಗಿ ಆದಿತ್ಯನಾಥ್
ತ್ರಿಪುರಾ ವಿಧಾನಸಭಾ ಚುನಾವಣೆಗೆ ಇನ್ನೂ ನಾಲ್ಕು ದಿನ ಬಾಕಿ ಇರುವಂತೆಯೇ ಪ್ರಚಾರದ ಅಖಾಡ ರಂಗೇರಿದೆ.

ಅಗರ್ತಲಾ : ತ್ರಿಪುರಾ ವಿಧಾನಸಭಾ ಚುನಾವಣೆಗೆ ಇನ್ನೂ ನಾಲ್ಕು ದಿನ ಬಾಕಿ ಇರುವಂತೆಯೇ ಪ್ರಚಾರದ ಅಖಾಡ ರಂಗೇರಿದೆ. ಸತತ 25 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಎಡಪಕ್ಷವನ್ನು ಶತಾಯಗತಾಯ ಸೋಲಿಸಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದೆ.
ಇಂದು ಬಿಜೆಪಿ ಪರವಾಗಿ ಪ್ರಚಾರ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೇಂದ್ರಸರ್ಕಾರ ಜಾರಿಗೊಳಿಸಿರುವ ಮಹತ್ವಕಾಂಕ್ಷಿಯ ಯೋಜನೆಗಳು ಬಡಜನರಿಗೆ ತಲುಪಲಿವೆ ಎಂದು ಹೇಳಿದರು..
ಕೇಂದ್ರಸರ್ಕಾರದ ಮಹತ್ವದ ಯೋಜನೆಗಳನ್ನು ಬಳಸಿಕೊಳ್ಳುವಲ್ಲಿ ಎಡಪಕ್ಷದ ಸರ್ಕಾರ ವಿಫಲವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೇಂದ್ರಹಾಗೂ ರಾಜ್ಯಗಳ ನಡುವೆ ಉತ್ತಮ ಸಂಬಂಧವೇರ್ಪಟ್ಟು, ಕೇಂದ್ರಸರ್ಕಾರದ ಎಲ್ಲಾ ಕಲ್ಯಾಣಪರ ಯೋಜನೆಗಳ ಅನುಕೂಲ ಪಡೆಯಬಹುದು ಎಂದರು.
ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದಾಗ ಅಭಿವೃದ್ದಿ ಪರ ಯೋಜನೆಗಳು ಕಾರ್ಯಗತಗೊಳ್ಳಲಿವೆ. ಆದರೆ, ಕೇಂದ್ರಸರ್ಕಾರದ ಪ್ರಧಾನಮಂತ್ರಿ ಮುದ್ರಾ ಯೋಜನೆ, ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ, ಪ್ರಧಾನಮಂತ್ರಿ ಉಜ್ವಲ ಯೋಜನೆ ಸೇರಿದಂತೆ ಮತ್ತಿತರ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ತ್ರಿಪುರಾ ಜನತೆ ವಿಫಲರಾಗಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


