ಓವರ್ ಟೇಕ್ ಮಾಡಿದ್ದಕ್ಕೆ ಕ್ಯಾಬ್ ಚಾಲಕನ ಹತ್ಯೆ!
ವಾಹನವನ್ನು ಹಿಂದಿಕ್ಕಿದ್ದಕ್ಕಾಗಿ ಕ್ಯಾಬ್ ಚಾಲಕನನ್ನು ದ್ವಿಚಕ್ರವಾಹನ ಚಲಾಯಿಸುತ್ತಿದ್ದವರು ಹತ್ಯೆ ಮಾಡಿರುವ ಘಟನೆ ಮುಂಬೈ ನಲ್ಲಿ ನಡೆದಿದೆ.

ಮುಂಬೈ: ವಾಹನವನ್ನು ಹಿಂದಿಕ್ಕಿದ್ದಕ್ಕಾಗಿ ಕ್ಯಾಬ್ ಚಾಲಕನನ್ನು ದ್ವಿಚಕ್ರವಾಹನ ಚಲಾಯಿಸುತ್ತಿದ್ದವರು ಹತ್ಯೆ ಮಾಡಿರುವ ಘಟನೆ ಮುಂಬೈ ನಲ್ಲಿ ನಡೆದಿದೆ.
ಗೋವಂದಿ ಈಸ್ಟ್ ನಲ್ಲಿ ಈಘಟನೆ ನಡೆದಿದ್ದು, ಸಲೀಮ್ ಗೌಲಮ್ ಶೇಖ್ ಹತ್ಯೆಯಾಗಿರುವ ಕಾರು ಚಾಲಕನಾಗಿದ್ದಾನೆ. ಸಲೀಮ್ ಗೌಲಮ್ ಶೇಖ್ ಬೈಕ್ ನ್ನು ಓವರ್ ಟೇಕ್ ಮಾಡಬೇಕಾದರೆ ಬೈಕ್ ಗೆ ಕಾರು ತಗುಲಿದ್ದು ಶೇಖ್ ಹಾಗೂ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದವರ ನಡುವೆ ವಾಗ್ವಾದ ಪ್ರಾರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಶೇಖ್ ನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹಲ್ಲೆಗೊಳಗಾದ ಚಾಲಕನಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕಿ ಉಳಿಯಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


